Friday, June 5, 2026
Homeಕರಾವಳಿಕಡಬ: ಗಾಂಜಾ ಅಮಲಿನಲ್ಲಿ ತೇಲಾಡುತ್ತಿದ್ದ ಇಬ್ಬರು ಯುವಕರ ಬಂಧನ

ಕಡಬ: ಗಾಂಜಾ ಅಮಲಿನಲ್ಲಿ ತೇಲಾಡುತ್ತಿದ್ದ ಇಬ್ಬರು ಯುವಕರ ಬಂಧನ

- Advertisement -
- Advertisement -

ಕಡಬ: ಗಾಂಜಾ ಅಮಲಿನಲ್ಲಿ ತೇಲಾಡುತ್ತಿದ್ದ ಇಬ್ಬರು ಯುವಕರನ್ನು ಪೊಲೀಸರು ಅರೆಸ್ಟ್ ಮಾಡಿರುವ ಘಟನೆ ದ.ಕ ಜಿಲ್ಲೆಯ ಕಡಬ ತಾಲೂಕಿನಲ್ಲಿ ನಡೆದಿದೆ.

ಕಡಬ ಠಾಣಾ ಎಸೈ ಆಂಜನೇಯ ರೆಡ್ಡಿ ಗಸ್ತಿನಲ್ಲಿದ್ದಾಗ ಕಳಾರ ಸಮೀಪದ ಮಸೀದಿ ಬಳಿಯ ಅಂಗಡಿಯ ಪಕ್ಕದಲ್ಲಿ ಓರ್ವ ಗಾಂಜಾ ಸೇವಿಸಿ ತೂರಾಟ ನಡೆಸುತ್ತಿದ್ದ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಸ್ಥಳಕ್ಕೆ ತೆರಳಿದ್ದು, ಮಾದಕ ಸೇವಿಸಿರುವುದು ಅನುಮಾನ ಬರುತ್ತಿದ್ದಂತೆ ವಶಕ್ಕೆ ಪಡೆದು ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಗಾಂಜಾ ಸೇವಿಸಿರುವುದು ದೃಢಪಟ್ಟಿದೆ.

ಇನ್ನೊಂದು ಪ್ರಕರಣ ಮರ್ದಾಳದಲ್ಲಿ ನಡೆದಿದ್ದು,ಮರ್ದಾಳ ಮಸೀದಿಯ ಬಳಿಯ ಆಟೋ ರಿಕ್ಷಾ ನಿಲ್ದಾಣದ ಪಕ್ಕದಲ್ಲಿ ವ್ಯಕ್ತಿಯೋರ್ವ ಮಾದಕ ವಸ್ತು ಸೇವಿಸಿ ತೂರಾಡುತ್ತಿದ್ದಾನೆ ಎಂಬ ಬಗ್ಗೆ ಸಾರ್ವಜನಿಕರಿಂದ ಬಂದ ಮಾಹಿತಿಯ ಆಧಾರದಲ್ಲಿ ಸ್ಥಳಕ್ಕೆ ತೆರಳಿ ವಶಕ್ಕೆ ಪಡೆದು ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಮಾದಕ ವಸ್ತು ಸೇವಿಸಿರುವುದು ದೃಢಪಟ್ಟಿದೆ.

ಗಾಂಜಾ ಸೇವಿಸಿರೋದು ವೈದ್ಯರ ವರದಿಯಿಂದ ದೃಢಪಡುತ್ತಿದ್ದಂತೆ ಇಬ್ಬರನ್ನೂ ಬಂಧಿಸಲಾಗಿದ್ದು, ಬಂಧಿತ ಆರೋಪಿಗಳನ್ನು ಬಂಟ್ರ ಪಿಲಿಮಜಲು ಮರುವಂತಿಲ ನಿವಾಸಿ ಮಹಮ್ಮದ್ ಶಾಫಿ(35) ಹಾಗೂ ಕಳಾರ ಕಾಲನಿ ನಿವಾಸಿ ಮಹಮ್ಮದ್ ತ್ವಾಹ(18) ಎಂದು ಗುರುತಿಸಲಾಗಿದೆ. ಈ ಬಗ್ಗೆ ಪೊಲೀಸರು ತಮಿಖೆ ಮುಂದುವರೆಸಿದ್ದಾರೆ.

- Advertisement -

Latest News

error: Content is protected !!