Tuesday, June 30, 2026
Homeಕರಾವಳಿಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರ ಬಂಧನ

ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರ ಬಂಧನ

- Advertisement -
- Advertisement -

ಮಂಗಳೂರು; ಮಾದಕ ವಸ್ತು ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರನ್ನು ಬಂಧಿಸಿರುವ ಘಟನೆ ಮಂಗಳೂರಿನ ಮೂಡುಶೆಡ್ಡೆಯ ಬಳಿ ನಡೆದಿದೆ.

ಪಿಲಿಕುಳ ಸಮೀಪದ ನಿವಾಸಿ ಶಾರೂಕ್ (27) ಮತ್ತು ತೋಕೂರಿನ ಜಗದೀಶ್ (45) ಬಂಧಿತರು.ಆರೋಪಿಗಳಿಂದ 4.5 ಗ್ರಾಂ ಎಂಡಿಎಂಎ, ಮೂರು ಮಾರಕ ಆಯುಧಗಳು, ಕೃತ್ಯಕ್ಕೆ ಬಳಸಿದ್ದ ಕಾರನ್ನು ವಶಪಡಿಸಲಾಗಿದೆ. ಇದರ ಮೌಲ್ಯ 4,41,700 ರೂ. ಎಂದು ಅಂದಾಜಿಸಲಾಗಿದೆ.

ಆರೋಪಿಗಳು ಮೂಡುಶೆಡ್ಡೆಗೆ ಹೋಗುವ ದಾರಿಯಲ್ಲಿ ನಿಂತು ಮಾದಕ ವಸ್ತು ಮಾರಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಮಾಹಿತಿ ಪಡೆದ ಕಾವೂರು ಠಾಣೆಯ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ.

- Advertisement -

Latest News

error: Content is protected !!