Saturday, June 6, 2026
Homeಕರಾವಳಿಬಂಟ್ವಾಳದಲ್ಲಿ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆಗೆ ಯತ್ನ ; ಇಬ್ಬರ ಬಂಧನ

ಬಂಟ್ವಾಳದಲ್ಲಿ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆಗೆ ಯತ್ನ ; ಇಬ್ಬರ ಬಂಧನ

- Advertisement -
- Advertisement -

ಬಂಟ್ವಾಳ;  ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆಗೆ ಯತ್ನಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ.

. ಬಂಟ್ವಾಳ ತಾಲೂಕಿನ ಬಿಸಿ ರೋಡಿನಲ್ಲಿ ಜೂನ್‌ 27 ರಂದು ಘಟನೆ ನಡೆದಿದೆ.  ಪೋಲಿಸ್‌ ಸಿಬ್ಬಂದಿಯೊಬ್ಬರು ಪತ್ನಿ ಮತ್ತು ಪತ್ನಿಯ ಸಹೋದರಿಯ ಜೊತೆಗೆ ಊಟ ಮಾಡಿಕೊಂಡು ವಾಪಾಸ್ಸಾಗುತ್ತಿದ್ದಾಗ ಇಬ್ಬರು ಯುವಕರು ಅಡ್ಡಗಟ್ಟಿ ಎಲ್ಲಿಗೆ ಹೋಗುತ್ತಿದ್ದೀಯಾ ಅಂತ ಪ್ರಶ್ನೆ ಮಾಡಿದ್ದಾರೆ ಎನ್ನಲಾಗಿದೆ.ಈ ವೇಳೆ ನಾನು ಪೋಲಿಸು ಅಂದ್ರು ಕೂಡ ಇಬ್ಬರು ಆರೋಪಿಗಳು ಪೋಲಿಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಲು ಯತ್ನಿಸಿದ್ದಾರೆ ಎನ್ನಲಾಗಿದೆ.

ಪೋಲಿಸ್ ಸಿಬ್ಬಂದಿ ಮೊದಲು ಡಿವೈಎಸ್‌ಪಿ ಕಚೇರಿಯಲ್ಲಿ ಕೆಲಸದಲ್ಲಿ ಇದ್ದರು ಎನ್ನಲಾಗಿದ್ದು, ಈಗ ಎನ್‌ಐಎ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದಾರ ಅಂತ ತಿಳಿದು ಬಂದಿದೆ. ಸದ್ಯ ಘಟನೆ ಸಂಬಂಧ ಮನೀಶ್‌ ಪೂಜಾರ್‌, ಮಂಜುನಾಥ್‌ ಆಚಾರ್ಯ ಎನ್ನುವರನ್ನು ವಶಕ್ಕೆ ಪಡೆದುಕೊಂಡಿದ್ದು, ಸದ್ಯ ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣ ಸದ್ಯ ಬಂಟ್ವಾಳ ಪೋಲಿಸ್‌ ಠಾಣೆಯಲ್ಲಿ ದಾಖಲಾಗಿದೆ.

- Advertisement -

Latest News

error: Content is protected !!