Sunday, June 7, 2026
Homeಕರಾವಳಿಪುತ್ತೂರಿನಲ್ಲಿ ಬಿಜೆಪಿ ನಾಯಕರಿಗೆ ಶ್ರದ್ಧಾಂಜಲಿ ಸಲ್ಲಿಸಿ ಬ್ಯಾನರ್ ಅಳವಡಿಸಿದ ಪ್ರಕರಣ; ಇಬ್ಬರನ್ನು ಬಂಧಿಸಿದ ಪೊಲೀಸರು

ಪುತ್ತೂರಿನಲ್ಲಿ ಬಿಜೆಪಿ ನಾಯಕರಿಗೆ ಶ್ರದ್ಧಾಂಜಲಿ ಸಲ್ಲಿಸಿ ಬ್ಯಾನರ್ ಅಳವಡಿಸಿದ ಪ್ರಕರಣ; ಇಬ್ಬರನ್ನು ಬಂಧಿಸಿದ ಪೊಲೀಸರು

- Advertisement -
- Advertisement -

ಪುತ್ತೂರಿನಲ್ಲಿ ಬಿಜೆಪಿ ನಾಯಕರಿಗೆ ಶ್ರದ್ಧಾಂಜಲಿ ಸಲ್ಲಿಸಿ ಬ್ಯಾನರ್ ಅಳವಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.ನರಿಮೊಗರು ಸಮೀಪದ ವಿಶ್ವನಾಥ್ ಮತ್ತು ಮಾಧವ ಬಂಧಿತ ಆರೋಪಿಗಳು.

 ಇವರು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಕೇಂದ್ರ ಮಾಜಿ ಸಚಿವ, ಸಂಸದ ಡಿ.ವಿ ಸದಾನಂದ ಗೌಡ ಅವರಿಗೆ ಶ್ರದ್ಧಾಂಜಲಿ ಕೋರಿ ಚಪ್ಪಲಿ ಹಾರ ಹಾಕಿ ಇಂದು ಪುತ್ತೂರು ಬಸ್ ನಿಲ್ದಾಣದ ಬಳಿ ಬ್ಯಾನರ್ ಅಳವಡಿಸಿದ್ದರು. ಈ ಘಟನೆಗೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಪುತ್ತೂರು ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.

- Advertisement -

Latest News

error: Content is protected !!