- Advertisement -


- Advertisement -
ಬಂಟ್ವಾಳ; ವ್ಯಕ್ತಿಯನ್ನು ಅಡ್ಡಗಟ್ಟಿ ಹಲ್ಲೆ ನಡೆಸಿ, ಮೊಬೈಲ್ ಕಸಿದುಕೊಂಡು ಪರಾರಿಯಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೆ ರವೀಶ್ ಕುಲಾಲ್ (40) ಅಶೋಕ (42) ಎಂಬಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ದಿನಾಂಕ 31-01-2026 ರಂದು ಸಂಜೆ ವಿಟ್ಲದ ಪಡ್ನೂರು ಗ್ರಾಮದವರಾದ ಇಸುಬು ಎಂಬವರು ಮಾರ್ನಮಿಗುಡ್ಡೆ ಪ್ರದೇಶದಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಮೂವರು ಅಪರಿಚಿತ ಮುಸುಕುಧಾರಿಗಳು ತಡೆದು ಹಲ್ಲೆ ನಡೆಸಿ, ಕೈಯಿಂದ ಮತ್ತು ಕಟ್ಟಿಗೆ ತುಂಡಿನಿಂದ ಹೊಡೆದು ಗಾಯಗೊಳಿಸಿ, ಅವರ ಬಳಿ ಇದ್ದ ಮೊಬೈಲ್ ಫೋನ್ ಅನ್ನು ಕಸಿದುಕೊಂಡು ಪರಾರಿಯಾಗಿರುತ್ತಾರೆ ಎಂದು ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು ಅದರಂತೆ ತನಿಖೆ ನಡೆಸಿದ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದು,ಕಾನೂನು ಕ್ರಮ ಕೈಗೊಂಡಿದ್ದಾರೆ.
- Advertisement -


