Sunday, June 7, 2026
Homeಕರಾವಳಿಉಜಿರೆ: ಎರಡು ಕಾರುಗಳ ಮುಖಾಮುಖಿ ಡಿಕ್ಕಿ; ಐವರಿಗೆ ಗಾಯ!

ಉಜಿರೆ: ಎರಡು ಕಾರುಗಳ ಮುಖಾಮುಖಿ ಡಿಕ್ಕಿ; ಐವರಿಗೆ ಗಾಯ!

- Advertisement -
- Advertisement -

ಬೆಳ್ತಂಗಡಿ: ಉಜಿರೆಯ ಸಿದ್ಧವನ ಬಳಿ ಎರಡು ಕಾರುಗಳು ಮುಖಾಮುಖಿಯಾಗಿ ಡಿಕ್ಕಿಯಾದ ಪರಿಣಾಮ, ಐವರು ಗಾಯಗೊಂಡಿರುವ ಘಟನೆ ಗುರುವಾರ ರಂದು ನಡೆದಿದೆ.

ಸಂಜೆ 7.15ರ ಸುಮಾರಿಗೆ ಧರ್ಮಸ್ಥಳ ಕಡೆಯಿಂದ ಬರುತ್ತಿದ್ದ ಶಿವಮೊಗ್ಗದವರಾದ ಸುಧೀಂದ್ರ ಎಂಬವರ ಕಾರು ಮತ್ತು ಉಜಿರೆಯಿಂದ ಧರ್ಮಸ್ಥಳ ಕಡೆಗೆ ಹೋಗುತ್ತಿದ್ದ ಕಾರುಗಳು ಪರಸ್ಪರ ಡಿಕ್ಕಿಯಾಗಿದೆ.

ಇಂಡಿಕಾ ಕಾರಿನಲ್ಲಿದ್ದ ಮೂವರಿಗೂ ಗಾಯಗಳಾಗಿದ್ದು, ಮತ್ತೊಂದು ಕಾರಿನಲ್ಲಿದ್ದ ಸುಧೀರ್ ಮತ್ತು ಮನೆಯವರಿಗೂ ಸಣ್ಣ ಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಟ್ರಾಫಿಕ್ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!