- Advertisement -
- Advertisement -
ಮಂಗಳೂರು: ಭಾರೀ ಮಳೆಯ ಹಿನ್ನೆಲೆಯಲ್ಲಿ ಮಂಗಳೂರು ನಗರದಲ್ಲಿ ಮರದ ದೊಡ್ಡ ಕೊಂಬೆ ಮುರಿದು ಬಿದ್ದು ಎರಡು ಕಾರುಗಳು ಜಖಂಗೊಂಡಿವೆ.
ಕರಂಗಲ್ಪಾಡಿಯಲ್ಲಿ ರಸ್ತೆ ಬದಿ ನಿಲ್ಲಿಸಲ್ಪಟ್ಟಿದ್ದ ವಾಹನಗಳ ಮೇಲೆ ಮರದ ಕೊಂಬೆ ಬಿದ್ದಿದೆ.ಮರದ ಸಮೀಪದಲ್ಲೇ ಫಾಸ್ಟ್ ಫುಡ್ ಅಂಗಡಿಯೊಂದು ಇದ್ದು, ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಜಮಾಯಿಸಿದ್ದರು.
ಆದರೆ ಮರದ ಕೊಂಬೆ ಅಂಗಡಿ ಪಕ್ಕದಲ್ಲಿದ್ದ ರಸ್ತೆಗೆ ಬಿದ್ದ ಪರಿಣಾಮ ಹೆಚ್ಚಿನ ಅನಾಹುತ ತಪ್ಪಿ ಹೋಗಿದೆ.ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿ ಮರದ ಕೊಂಬೆಯನ್ನು ತೆರವುಗೊಳಿಸಿದ್ದಾರೆ.
- Advertisement -