- Advertisement -
![]()
- Advertisement -
ಕಾಸರಗೋಡು; ಕೆರೆಯಲ್ಲಿ ಸ್ನಾನಕ್ಕಿಳಿದ ಇಬ್ಬರು ಮಕ್ಕಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಕಾಞಂಗಾಡ್ ನ ಮಾಣಿಕ್ಕೋತ್ ನಲ್ಲಿ ಇಂದು ಸಂಜೆ ನಡೆದಿದೆ.
ಪಾಲೆಕ್ಕಿ ಅಝೀಝ್ ರವರ ಪುತ್ರ ಆಫಾಝ್(9) ಹಾಗೂ ಹೈದರ್ ರವರ ಪುತ್ರ ಅನ್ವರ್ (11) ಮೃತರು. ಈ ಘಟನೆಯಲ್ಲಿ ಮತ್ತೊರ್ವನ ಸ್ಥಿತಿ ಗಂಭೀರವಾಗಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇಂದು ಸಂಜೆ 4 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಮಾಣಿಕ್ಕೋತ್ ಪಾಲೆಕ್ಕಿ ಮಸೀದಿಯ ಕೆರೆಯಲ್ಲಿ ಸ್ನಾನಕ್ಕಿಳಿದ ಸಂದರ್ಭದಲ್ಲಿ ಘಟನೆ ನಡೆದಿದೆ. ಮಾಹಿತಿ ತಿಳಿದು ನಾಗರಿಕರು, ಅಗ್ನಿಶಾಮಕ ದಳದ ಸಿಬ್ಬಂದಿ, ಪೊಲೀಸರು ಮಕ್ಕಳನ್ನು ಹೊರ ತೆಗೆದರೂ ಇಬ್ಬರು ಮೃತಪಟ್ಟಿದ್ದರು. ಮೃತದೇಹವನ್ನು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.
- Advertisement -


