Thursday, June 4, 2026
Homeಕರಾವಳಿಡಾ. ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಪುತ್ತೂರು ಮತ್ತು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ದೂರು

ಡಾ. ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಪುತ್ತೂರು ಮತ್ತು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ದೂರು

- Advertisement -
- Advertisement -

ಪುತ್ತೂರು: ಶ್ರೀರಂಗಪಟ್ಟಣದಲ್ಲಿ ಮುಸ್ಲಿಂ ಮಹಿಳೆಯರ ವಿರುದ್ದ ಅವಹೇಳನಕಾರಿ ಹೇಳಿಕೆ ಆರೋಪದಡಿಯಲ್ಲಿ ಆರ್ ಎಸ್ ಎಸ್ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎರಡು ಪೊಲೀಸ್ ಠಾಣೆಗಳಲ್ಲಿ ಪ್ರತ್ಯೇಕ ದೂರು ದಾಖಲಾಗಿವೆ.

ವುಮೆನ್ ಇಂಡಿಯಾ ಮೂವ್ ಮೆಂಟ್ ನಿಂದ ಸಂಘಟನೆಯಿಂದ ಪುತ್ತೂರು ನಗರ ಹಾಗೂ ಉಪ್ಪಿನಂಗಡಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಪುತ್ತೂರು ನಗರ ಠಾಣೆಯಲ್ಲಿ ವುಮೆನ್ ಇಂಡಿಯಾ ಮೂವ್ ಮೆಂಟ್ ಸಂಘಟನೆಯ ಪುತ್ತೂರು ವಿಧಾನಸಭಾ ಕ್ಷೇತ್ರದ ಅಧ್ಯಕ್ಷೆ ಝಾಹಿದಾ ಸಾಗ‌ರ್ ಮತ್ತು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಕಾರ್ಯದರ್ಶಿ ಸೌಧ ಮಠ ದೂರು ನೀಡಿದ್ದಾರೆ. ಮಂಡ್ಯ ಜಿಲ್ಲೆಯಲ್ಲಿ ನಡೆದ ಸಮಾವೇಶದಲ್ಲಿ ಉದ್ದೇಶಪೂರ್ವಕವಾಗಿ ಮಹಿಳೆಯರ ಅವಹೇಳನ ಮಾಡಿರುವ ಆರೋಪದಡಿಯಲ್ಲಿ ದೂರು ನೀಡಲಾಗಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಭಾನುವಾರ ‌ನಡೆದಿದ್ದ ಹನುಮ ಸಂಕೀರ್ತನಾ ಯಾತ್ರೆಯ ಸಾರ್ವಜನಿಕ ಕಾರ್ಯಕ್ರಮದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾಡಿದ್ದ ಭಾಷಣ ವಿವಾದಕ್ಕೆಡೆಯಾಗಿತ್ತು.

- Advertisement -

Latest News

error: Content is protected !!