Wednesday, May 8, 2024
Homeಕರಾವಳಿಉಡುಪಿಕರಾವಳಿ ಜಿಲ್ಲೆಗಳಿಗೆ ಎರಡು ದಿನ ರೆಡ್ ಅಲರ್ಟ್!

ಕರಾವಳಿ ಜಿಲ್ಲೆಗಳಿಗೆ ಎರಡು ದಿನ ರೆಡ್ ಅಲರ್ಟ್!

spot_img
- Advertisement -
- Advertisement -

ಮಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಬಿರುಸು ಪಡೆದುಕೊಂಡಿದೆ. ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಜುಲೈ 22 ರವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವೆಡೆ ಗುಡುಗು ಸಹಿತ ಭಾರೀ ಪ್ರಮಾಣದಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಹೀಗಾಗಿ ಜುಲೈ 18 ಮತ್ತು 19ರಂದು ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್‌, ಜುಲೈ 20 ರಿಂದ 22ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ರಾಜ್ಯ ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.‌ ಇನ್ನು ಕೊಡಗು, ಚಿಕ್ಕಮಗಳೂರು, ಹಾಸನ ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಜುಲೈ 18 ಮತ್ತು 19ರಂದು ಆರೆಂಜ್‌ ಅಲರ್ಟ್‌, ಜುಲೈ 20 ಮತ್ತು 21ರಂದು ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ನಾಲ್ಕು ದಿನಗಳ ಕಾಲ ಅತೀ ಹೆಚ್ಚಿನ ಪ್ರಮಾಣದಲ್ಲಿ ಮಳೆ ಬೀಳುವ‌ ನಿರೀಕ್ಷೆ ಇರುವ ಕಾರಣ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಸಿರುವ ಹವಾಮಾನ ಇಲಾಖೆ, ಸ್ಥಳೀಯರು ಎಚ್ಚರಿಕೆಯಿಂದ ಇರುವಂತೆ ಸೂಚಿಸಿದೆ.

- Advertisement -
spot_img

Latest News

error: Content is protected !!