Friday, June 5, 2026
Homeತಾಜಾ ಸುದ್ದಿಉಪ್ಪಿನಂಗಡಿಯಲ್ಲಿ ನೀರಿನಲ್ಲಿ ಮುಳುಗಿ ಯುವಕರಿಬ್ಬರು ಸಾವು

ಉಪ್ಪಿನಂಗಡಿಯಲ್ಲಿ ನೀರಿನಲ್ಲಿ ಮುಳುಗಿ ಯುವಕರಿಬ್ಬರು ಸಾವು

- Advertisement -
- Advertisement -

ಉಪ್ಪಿನಂಗಡಿ: ಸ್ನಾನಕ್ಕೆಂದು ನದಿಗೆ ಇಳಿದಿದ್ದ ಯುವಕರಿಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಸೋಮವಾರ ಸಂಜೆ ಕಡಬ ತಾಲ್ಲೂಕಿನ ಇಚಿಲಂಪಾಡಿಯಲ್ಲಿ ನಡೆದಿದೆ.

ನೆಲ್ಯಾಡಿ ಶಾಂತಿಬೆಟ್ಟು ನಿವಾಸಿ ಉಮ್ಮರ್ ಎಂಬವರ ಪುತ್ರ ಝಾಕಿರ್ (20) ಹಾಗೂ ಸಹೋದರಿಯ ಪುತ್ರ ಉಪ್ಪಿನಂಗಡಿ ಸಮೀಪದ ಸರಳಿಕಟ್ಟೆ ನಿವಾಸಿ ಸಿನಾನ್ (22) ಮೃತ ದುರ್ದೈವಿಗಳು. ಅವರಿಬ್ಬರು ಸ್ನಾನಕ್ಕೆಂದು ಇಚಿಲಂಪಾಡಿ ಸೇತುವೆ ಸಮೀಪ ನದಿಗೆ ಇಳಿದಿದ್ದರು. ಈ ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ವಿಷಯ ತಿಳಿದ ಸ್ಥಳೀಯರು ನೀರಿಗಿಳಿದು ಇಬ್ಬರ ಮೃತದೇಹವನ್ನು ಮೇಲಕ್ಕೆ ಎತ್ತಿದ್ದಾರೆ. ಸ್ಥಳಕ್ಕೆ ಕಡಬ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!