Thursday, June 4, 2026
Homeಕರಾವಳಿಉಡುಪಿಕುಂದಾಪುರ:  ಕಾರು ಮತ್ತು ಸ್ಕೂಟರ್ ನಡುವೆ ನಡೆದ ಅಪಘಾತ; ಇಬ್ಬರು ಸಾವು

ಕುಂದಾಪುರ:  ಕಾರು ಮತ್ತು ಸ್ಕೂಟರ್ ನಡುವೆ ನಡೆದ ಅಪಘಾತ; ಇಬ್ಬರು ಸಾವು

- Advertisement -
- Advertisement -

ಕುಂದಾಪುರ:  ಕಾರು ಮತ್ತು ಸ್ಕೂಟರ್ ನಡುವೆ ನಡೆದ ಅಪಘಾತ ಸಂಭವಿಸಿ ಇಬ್ಬರು ಸಾವನ್ನಪ್ಪಿರುವ ಘಟನೆ ಬಸ್ರೂರು ಸಮೀಪದ ಬಳ್ಕೂರು ಬಿ.ಹೆಚ್. ಶಾಲೆ ಬಳಿ ನಡೆದಿದೆ. ಬಳ್ಕೂರಿನ ರಾಜೀವ ಶೆಟ್ಟಿ(50) ಹಾಗೂ ಸುಧೀರ್ ದೇವಾಡಿಗ(35) ಮೃತರು.

ಅಭಿಷೇಕ್ ಶೆಟ್ಟಿ ಅನ್ನೋರು ಕಂಡ್ಲೂರು ಕಡೆಯಿಂದ ಕುಂದಾಪುರ ಕಡೆಗೆ ಅತಿವೇಗ ಹಾಗೂ ಅಜಾಗರೂಕತೆ ಚಲಾಯಿಸಿಕೊಂಡು ಬಂದ ಮಾರುತಿ ಸಿಫ್ಟ್ ಕಾರೊಂದು

ಬಸ್ರೂರುಯಿಂದ ಕಂಡ್ಲೂರು ಕಡೆಗೆ ಹೋಗುತ್ತಿದ ಸ್ಕೂಟರ್ ಗೆ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಸ್ಕೂಟರ್ ಸವಾರರು ಗಂಭೀರ ಗಾಯಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಕುಂದಾಪುರ ಸಂಚಾರ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲಿಸಿ ಪ್ರಕರಣ ದಾಖಲಿಸಿ ಕೊಂಡಿದ್ದಾರೆ. ಪೊಲೀಸರು ತನಿಖೆ ನಡೆಸಿದ್ದಾರೆ.

- Advertisement -

Latest News

error: Content is protected !!