Thursday, June 4, 2026
Homeಕರಾವಳಿಗುಂಡ್ಯ: ಶಿರಾಡಿ ಘಾಟಿಯಲ್ಲಿ ಮಿನಿಲಾರಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಪರಾರಿ; ಇಬ್ಬರು ಸ್ಥಳದಲ್ಲೇ ಸಾವು

ಗುಂಡ್ಯ: ಶಿರಾಡಿ ಘಾಟಿಯಲ್ಲಿ ಮಿನಿಲಾರಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಪರಾರಿ; ಇಬ್ಬರು ಸ್ಥಳದಲ್ಲೇ ಸಾವು

- Advertisement -
- Advertisement -

ಗುಂಡ್ಯ: ಮಿನಿಲಾರಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಪರಾರಿಯಾದ ಘಟನೆ ಶಿರಾಡಿ ಘಾಟಿಯಲ್ಲಿ ನಡೆದಿದೆ. ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಶಿರಾಡಿ ಘಾಟ್ ನ ಗುಂಡ್ಯ ಗಡಿ ದೇವಸ್ಥಾನಕ್ಕಿಂತ ಮೇಲೆ ಕೆಂಪು ಹೊಳೆ ಸಮೀಪ ಮಿನಿ ಲಾರಿಯೊಂದಕ್ಕೆ ಯಾವುದೋ ವಾಹನವೊಂದು ಡಿಕ್ಕಿಯಾಗಿ ಪರಾರಿಯಾಗಿದೆ. ಈ ಅಪಘಾತದಲ್ಲಿ ಮಿನಿ ಲಾರಿಯಲ್ಲಿದ್ದ ಚಾಲಕ ಹಾಗೂ ಇನ್ನೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಡಿ.6ರ ಮುಂಜಾನೆ 3 ಗಂಟೆ ವೇಳೆಗೆ ನಡೆದಿದೆ .

ಮೃತಪಟ್ಟವರು ಹಾಸನ ನಿವಾಸಿಗಳು ಎನ್ನಲಾಗಿದೆ. ಮಿನಿ ಲಾರಿ ಹಾಸನದಿಂದ ಮಂಗಳೂರಿಗೆ ಬರುತ್ತಿತ್ತು. ಶಿರಾಡಿ ಘಾಟ್ ನ ಕೆಂಪು ಹೊಳೆ ಸಮೀಪ ಮಿನಿ ಲಾರಿಗೆ ಯಾವುದೋ ಘನ ವಾಹನ ಡಿಕ್ಕಿ ಯಾಗಿ ಪರಾರಿಯಾಗಿದೆ. ಘಟನೆಯಲ್ಲಿ ಮಿನಿ ಲಾರಿ ಸಂಪೂರ್ಣ ಜಖಂ ಗೊಂಡಿದೆ.

ಮಿನಿ ಲಾರಿಯಲ್ಲಿದ್ದ ಚಾಲಕ ಹಾಗೂ ಇನ್ನೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವುದಾಗಿ ವರದಿಯಾಗಿದೆ. ಘಟನಾ ಸ್ಥಳಕ್ಕೆ ಸಕಲೇಶಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!