- Advertisement -
- Advertisement -
ಕಾರ್ಕಳ: ಕಲ್ಲು ಕೊಂಡೊಗುತ್ತಿದ್ದ ಲಾರಿ ಪಲ್ಟಿಯಾಗಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ಸಮೀಪದ ಕಲ್ಲು ಕೊರೆಯ ಬಳಿ ನಡೆದಿದೆ.ಕೊಪ್ಪಳ ಜಿಲ್ಲೆಯ ಯಲಬುರ್ಗಿ ದೇವಲಾಪುರ ನಿವಾಸಿ ಕರಿಯಪ್ಪ(26) ಮತ್ತು ನರಿಯಪ್ಪ(27) ಮೃತರು.
ಕಾರ್ಕಳ ನಿಟ್ಟೆ ಬ್ರಹ್ಮರಿ ಕ್ರಾಸ್ ಸಮೀಪ ಲಾರಿಯಲ್ಲಿ ಕಲ್ಲು ಲೋಡ್ ಮಾಡಿಕೊಂಡು ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಕಲ್ಲು ಹೇರಿಕೊಂಡು ಹೋಗುತ್ತಿದ್ದ ಲಾರಿ ಕೋರೆಯ ಪಕ್ಕದ ಇಳಿಜಾರು ರಸ್ತೆಯಲ್ಲಿ ಚಲಿಸುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿದೆ. ಈ ವೇಳೆ ಕಾರ್ಮಿಕರು ಲಾರಿಯ ಚಕ್ರದ ಅಡಿಯಲ್ಲಿ ಸಿಲುಕಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಕಾರ್ಕಳ ಡಿವೈಎಸ್ಪಿ ಅರವಿಂದ ಕಲಗುಜ್ಜಿ ಹಾಗೂ ಕಾರ್ಕಳ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
- Advertisement -