Friday, August 28, 2026
Homeಕರಾವಳಿಉಡುಪಿಉಡುಪಿ: ಮೀನು ಹಿಡಿಯಲು ಹೋದ ಯುವಕರಿಬ್ಬರು ನೀರಿನಲ್ಲಿ ಮುಳುಗಿ ಸಾವು

ಉಡುಪಿ: ಮೀನು ಹಿಡಿಯಲು ಹೋದ ಯುವಕರಿಬ್ಬರು ನೀರಿನಲ್ಲಿ ಮುಳುಗಿ ಸಾವು

- Advertisement -
- Advertisement -

ಉಡುಪಿ: ಮೀನು ಹಿಡಿಯಲು ಹೋದ ಯುವಕರಿಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹೊಸಾಳ ಗ್ರಾಮದ ಸೀತಾನದಿಯಲ್ಲಿ ಇಂದು  ಮಂಗಳವಾರ ಬೆಳಗ್ಗೆ ಸಂಭವಿಸಿದೆ.

ಹೊಸಾಳ ಗ್ರಾಮದ ಶ್ರೀಶ(21) ಹಾಗೂ ಪ್ರಶಾಂತ್ ಪೂಜಾರಿ (30) ಮೃತರು.  ಇವರಿಬ್ಬರು ಮೀನು ಹಿಡಿಯಲೆಂದು ನಾಗರಮಠದ ಸೀತಾನದಿಗೆ ದೋಣಿಯಲ್ಲಿ ತೆರಳಿದ್ದರು. ಅಲ್ಲಿ ಇವರು ಮೀನಿಗೆ ಬಲೆ ಹಾಕುವಾಗ ನೀರಿನ ಸೆಳೆತಕ್ಕೆ ಸಿಲುಕಿ ನೀರಿಗೆ ಬಿದ್ದರೆನ್ನಲಾಗಿದೆ. ಕೂಡಲೇ ಸ್ಥಳೀಯರು ಮುಳುಗುತ್ತಿರುವ ಇವರ ರಕ್ಷಣೆಗೆ ಧಾವಿಸಿದರೂ ರಕ್ಷಿಸಲು ಸಾಧ್ಯವಾಗದೆ ನೀರಿನ ಸೆಳೆತಕ್ಕೆ ಕೊಚ್ಚಿ ಹೋದರು ಎನ್ನಲಾಗಿದೆ.  ಬಳಿಕ ಅಗ್ನಿಶಾಮಕ ದಳ, ಮುಳುಗು ತಜ್ಞ ಈಶ್ವರ್ ಮಲ್ಪೆ ಹಾಗೂ ಸ್ಥಳೀಯರ ಕಾರ್ಯಾಚರಣೆ ನಡೆಸಿ ಮೃತದೇಹವನ್ನು ಮೇಲಕ್ಕೆತ್ತಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!