Tuesday, May 14, 2024
Homeಕರಾವಳಿಉಡುಪಿಉಡುಪಿ ಜಿಲ್ಲೆಯ ಇಬ್ಬರು ರಾಜ್ಯ ಸರ್ಕಾರಿ ನೌಕರರಿಗೆ 2022ನೇ ಸಾಲಿನ ರಾಜ್ಯಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ

ಉಡುಪಿ ಜಿಲ್ಲೆಯ ಇಬ್ಬರು ರಾಜ್ಯ ಸರ್ಕಾರಿ ನೌಕರರಿಗೆ 2022ನೇ ಸಾಲಿನ ರಾಜ್ಯಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ

spot_img
- Advertisement -
- Advertisement -

ಬೆಂಗಳೂರು: 2022ನೇ ಸಾಲಿನ ರಾಜ್ಯ ಸರ್ಕಾರದ ಸರ್ವೋತ್ತಮ ಪ್ರಶಸ್ತಿಗಳನ್ನು ಘೋಷಿಸಲಾಗಿದೆ. ಉಡುಪಿ ಜಿಲ್ಲೆಯ ಇಬ್ಬರಿಗೆ ರಾಜ್ಯಮಟ್ಟದ ಸರ್ವೋತ್ತಮ ಪ್ರಶಸ್ತಿ ಘೋಷಿಸಲ್ಪಟ್ಟಿದೆ.

ಉಡುಪಿ ಜಿಲ್ಲೆಯ ಬ್ರಹ್ಮಾವರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ನಿಲಯ ಮೇಲ್ವಿಚಾರಕರಾದ ಆಶಾದೇವಿ ಕೇಶವ ನಾಯಕ್ ಮತ್ತು ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಎ. ಶ್ರೀನಿವಾಸ ರಾವ್ ಅವರಿಗೆ ರಾಜ್ಯಮಟ್ಟದ ಸರ್ವೋತ್ತಮ ಪ್ರಶಸ್ತಿ ಘೋಷಣೆ ಯಾಗಿದೆ.

2022ನೇ ಸಾಲಿನಲ್ಲಿ ಒಟ್ಟು 30 ರಾಜ್ಯ ಸರ್ಕಾರಿ ನೌಕರರನ್ನು ರಾಜ್ಯ ಮಟ್ಟದ ಸರ್ವೋತ್ತಮ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ಪ್ರಶಸ್ತಿ ಮೊತ್ತ 50 ಸಾವಿರ ರೂಪಾಯಿಗಳನ್ನು ಒಳಗೊಂಡಿದೆ.

ಅತ್ಯುನ್ನತ ಸೇವೆ ಸಲ್ಲಿಸಿದ ಸರ್ಕಾರಿ ನೌಕರರಿಗೆ ಪ್ರತೀ ವರ್ಷ ಸರ್ವೋತ್ತಮ ಸೇವಾ ಪ್ರಶಸ್ತಿಗಳನ್ನು ರಾಜ್ಯಮಟ್ಟ ಮತ್ತು ಜಿಲ್ಲಾಮಟ್ಟದಲ್ಲಿ ನೀಡಲಾಗುತ್ತಿದೆ.

- Advertisement -
spot_img

Latest News

error: Content is protected !!