Thursday, June 4, 2026
Homeಕರಾವಳಿಉಡುಪಿಕಾಪು: ಕಾಲೇಜಿನಲ್ಲಿ ಎರಡು ವಿದ್ಯಾರ್ಥಿ ಗುಂಪುಗಳ ನಡುವೆ ಘರ್ಷಣೆ !

ಕಾಪು: ಕಾಲೇಜಿನಲ್ಲಿ ಎರಡು ವಿದ್ಯಾರ್ಥಿ ಗುಂಪುಗಳ ನಡುವೆ ಘರ್ಷಣೆ !

- Advertisement -
- Advertisement -

ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಎರಡು ಪ್ರತ್ಯೇಕ ವಿದ್ಯಾರ್ಥಿ ಗುಂಪುಗಳ ಮಧ್ಯೆ ಮಾತಿನ ಚಕಮಕಿ ನಡೆದು, ಅದು ಕೈಕೈಮಿಲಾಸುವ ಹಂತಕ್ಕೆ ತಲುಪಿದ ಘಟನೆ ಇಂದು ನಡೆದಿದೆ. ಕೂಡಲೇ ಕಾಪು ಪೊಲೀಸರು ಸ್ಥಳಕ್ಕೆ ಬಂದು ಪರಿಸ್ಥಿತಿ ತಿಳಿಗೊಳಿಸಿದ್ದಾರೆ.

ಅನ್ಯಕೋಮಿನ ಯುವಕನೋರ್ವ ಯುವತಿಯೋರ್ವಳೊಂದಿಗೆ ಮಾತನಾಡಿದಕ್ಕೆ ವಿದ್ಯಾರ್ಥಿಗಳ ತಂಡ ಆತನ ಮೇಲೆ ಹಲ್ಲೆ ನಡೆಸಿದೆ ಎನ್ನಲಾಗಿದೆ. ಇದರಿಂದ ಸಿಟ್ಟುಗೊಂಡ ಯುವಕ ತನ್ನ ಸ್ನೇಹಿತರಿಗೆ ವಿಷಯ ತಿಳಿಸಿ ಅವರನ್ನು ಕಾಲೇಜಿಗೆ ಬರುವಂತೆ ತಿಳಿಸಿದ್ದಾನೆ.

ಆ ಬಳಿಕ ಕಾಲೇಜಿನ ಹೊರಗೆ ತಂಡವೊಂದು ಬಂದಿದ್ದು, ಇದರಿಂದ ಕಾಲೇಜಿನ ಆವರಣದಲ್ಲಿ ಕೆಲಕಾಲ ಬಿಗುವಿನ ವಾತಾವರಣ ಸೃಷ್ಟಿಯಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.

ವಿದ್ಯಾರ್ಥಿಗಳ ಗಲಾಟೆ ಕೋಮುವಾದಕ್ಕೆ ತಿರುಗುತ್ತಿದ್ದಂತೆ ಕಾಲೇಜಿನ ಪ್ರಾಂಶುಪಾಲರು ಕಾಪು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಕಾಪು ಎಸ್‌ಐ ರಾಘವೇಂದ್ರ ಸಿ. ಮತ್ತು ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ, ಪರಿಸ್ಥಿತಿಯನ್ನು ಹತೋಟಿಗೆ ತಂದರು. ಹೊಡೆದಾಟಕ್ಕೆ ಯತ್ನಿಸಿದ ವಿದ್ಯಾರ್ಥಿಗಳನ್ನು ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ.

ಈ ಬಗ್ಗೆ ಕಾಲೇಜಿನ ಪ್ರಾಂಶುಪಾಲರು ದೂರು ನೀಡಿದ್ದು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!