Sunday, June 7, 2026
HomeUncategorizedಕ್ವಾರಂಟೈನ್ ಸೆಂಟರ್ ನಲ್ಲಿದ್ದ ಯುವತಿಯ ಸ್ನಾನದ ದೃಶ್ಯ ಸೆರೆಮಾಡಿದ ಕಿಡಿಗೇಡಿಗಳು

ಕ್ವಾರಂಟೈನ್ ಸೆಂಟರ್ ನಲ್ಲಿದ್ದ ಯುವತಿಯ ಸ್ನಾನದ ದೃಶ್ಯ ಸೆರೆಮಾಡಿದ ಕಿಡಿಗೇಡಿಗಳು

- Advertisement -
- Advertisement -

ಭೋಪಾಲ್: ಕ್ವಾರಂಟೈನ್ ಸೆಂಟರ್ ನಲ್ಲಿ ಯುವತಿಯ ಅಶ್ಲೀಲ ವೀಡಿಯೋ ಚಿತ್ರೀಕರಿಸಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ಘಟನೆ ನಡೆದಿದೆ. ಕ್ವಾರಂಟೈನ್ ಸೆಂಟರ್ ನಲ್ಲಿ ಯುವತಿಯ ಸ್ನಾನದ ದೃಶ್ಯಗಳನ್ನು ಸೆರೆ ಹಿಡಿದ 20 ವರ್ಷದ ಇಬ್ಬರು ಯುವಕರು ಯುವತಿಗೆ ಬೆದರಿಕೆ ಹಾಕಿದ್ದು ಈ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಗಿದೆ.

ದಾಮೋಹ್ ಜಿಲ್ಲೆಯ ನಿವಾಸಿಯಾಗಿರುವ ಯುವತಿ ಇಂದೋರ್ ನಿಂದ ತನ್ನ ಗ್ರಾಮಕ್ಕೆ ಹಿಂತಿರುಗಿದ್ದು ಸಾಗರ್ ಜಿಲ್ಲೆಯ ಕುಮಾರ್ ಭಟೋಲಿ ಗ್ರಾಮದ ಶಾಲೆಯಲ್ಲಿ ಆಕೆಯನ್ನು ಕ್ವಾರಂಟೈನ್ ನಲ್ಲಿ ಇರಿಸಲಾಗಿತ್ತು. ಕ್ವಾರಂಟೈನ್ ಸೆಂಟರ್ ಹೊರಗಡೆ ತಾತ್ಕಾಲಿಕ ಸ್ನಾನಗೃಹಗಳನ್ನು ನಿರ್ಮಿಸಿದ್ದು ಅಲ್ಲಿ ಯುವತಿ ಸ್ನಾನ ಮಾಡುವ ಸಂದರ್ಭದಲ್ಲಿ ಅದೇ ಗ್ರಾಮದವರಾದ ಆರೋಪಿಗಳು ತಮ್ಮ ಮೊಬೈಲ್ನಲ್ಲಿ ದೃಶ್ಯವನ್ನು ಸೆರೆಹಿಡಿದುಕೊಂಡಿದ್ದಾರೆ.

ಅಶ್ಲೀಲ ವಿಡಿಯೋ ತೋರಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಈ ಕುರಿತಾಗಿ ಯುವತಿ ಪೊಲೀಸರಿಗೆ ಮಾಹಿತಿ ನೀಡಿದ್ದು ಆರೋಪಿಗಳನ್ನು ಬಂಧಿಸಲಾಗಿದೆ, ಗರ್ ಕೋಟಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ ಎಂದು ಸಾಗರ್ ಜಿಲ್ಲಾ ಪೊಲೀಸ್ ಅಧೀಕ್ಷಕ ಅಮಿತ್ ಸೆಂಗಾಯ್ ತಿಳಿಸಿದ್ದಾರೆ.

- Advertisement -

Latest News

error: Content is protected !!