Monday, June 8, 2026
Homeಕರಾವಳಿಶಿವಮೊಗ್ಗ: ತುಂಗಾ ನದಿಯಲ್ಲಿ ಉಪನ್ಯಾಸಕರಿಬ್ಬರು ನೀರುಪಾಲು:ನೆರಿಯ ಗ್ರಾಮದ ಉಪನ್ಯಾಸಕ ನಾಪತ್ತೆ..!

ಶಿವಮೊಗ್ಗ: ತುಂಗಾ ನದಿಯಲ್ಲಿ ಉಪನ್ಯಾಸಕರಿಬ್ಬರು ನೀರುಪಾಲು:ನೆರಿಯ ಗ್ರಾಮದ ಉಪನ್ಯಾಸಕ ನಾಪತ್ತೆ..!

- Advertisement -
- Advertisement -

ಶಿವಮೊಗ್ಗ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ನಿಟ್ಟೆಯ ಖಾಸಗಿ ಕಾಲೇಜಿನ ಇಬ್ಬರು ಉಪನ್ಯಾಸಕರು ನೀರುಪಾಲಾದ ಘಟನೆ ಇಂದು ನಡೆದಿದೆ.

ತೀರ್ಥಹಳ್ಳಿ ತಾಲೂಕು ತೀರ್ಥ ಮತ್ತೂರು ಗ್ರಾಮದ ಬಳಿ ತುಂಗಾ ನದಿಯಲ್ಲಿ ಘಟನೆ ಸಂಭವಿಸಿದೆ. ಕಾರ್ಕಳದ ನಿಟ್ಟೆ ಕಾಲೇಜಿನ ಉಪನ್ಯಾಸಕರಾದ ಪುನೀತ್‌ (38) ಮತ್ತು ಬಾಲಾಜಿ (36) ತುಂಗಾ ನದಿಯಲ್ಲಿ ಈಜಲು ತೆರಳಿದ್ದರು. ಈ ವೇಳೆ ಇಬ್ಬರು ನೀರಿನ ರಭಸಕ್ಕೆ ನಾಪತ್ತೆಯಾಗಿದ್ದಾರೆ. ಪುನೀತ್ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ಬೋವಿನಡಿ ಎಂಬಲ್ಲಿಯ ನಿವಾಸಿಯಾಗಿದ್ದು ಇವರು ನಿಟ್ಟೆಯಲ್ಲಿ ಉಪನ್ಯಾಸಕರಾಗಿದ್ದರು.

ರಕ್ಷಣಾ ಕಾರ್ಯಾಚರಣೆ ವೇಳೆ ಒಬ್ಬರ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

- Advertisement -

Latest News

error: Content is protected !!