Wednesday, June 3, 2026
Homeಕರಾವಳಿಉಡುಪಿಉಡುಪಿ: 42 ವರ್ಷದ ಇಬ್ಬರು ವ್ಯಕ್ತಿಗಳು ಆತ್ಮಹತ್ಯೆ !

ಉಡುಪಿ: 42 ವರ್ಷದ ಇಬ್ಬರು ವ್ಯಕ್ತಿಗಳು ಆತ್ಮಹತ್ಯೆ !

- Advertisement -
- Advertisement -

ಉಡುಪಿ: ಕುಂದಾಪುರ ಹಾಗೂ ಕಾರ್ಕಳ ಠಾಣೆಯಲ್ಲಿ ದಾಖಲಾದ ಎರಡು ಪ್ರಕರಣಗಳಲ್ಲಿ ಇಬ್ಬರು 42 ವರ್ಷದ ವ್ಯಕ್ತಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕುಂದಾಪುರದ ಉಳ್ಳುರು ಕಂದಾವ್ರದಲ್ಲಿ 42 ವರ್ಷದ ಯು. ರಾಘವೇಂದ್ರ ಎಂಬವರು ಜೀವನದಲ್ಲಿ ಜಿಗುಪ್ಪೆಗೊಂಡು ತಮ್ಮ ಬಾಡಿಗೆಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತೊಂದೆಡೆ ಕಾರ್ಕಳದ ದುರ್ಗಾ ಗ್ರಾಮದ ಶೆಟ್ಟಿಬೆಟ್ಟು ಎಂಬಲ್ಲಿ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ 42 ವರ್ಷದ ಚಿದಾನಂದ ಭಟ್ಟ ಎಂಬವರು ಮನೆಯ ಹಿಂಭಾಗದಲ್ಲಿರುವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದಾಗಿ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .

- Advertisement -

Latest News

error: Content is protected !!