Friday, June 5, 2026
Homeಕರಾವಳಿಸುಳ್ಯ; ಬೆಳ್ಳಾರೆಯಲ್ಲಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಪ್ರಕರಣ; ಮತ್ತೆ ಇಬ್ಬರು ಆರೋಪಿಗಳನ್ನು ಬಂಧಿಸಿದ ಪೊಲೀಸರು

ಸುಳ್ಯ; ಬೆಳ್ಳಾರೆಯಲ್ಲಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಪ್ರಕರಣ; ಮತ್ತೆ ಇಬ್ಬರು ಆರೋಪಿಗಳನ್ನು ಬಂಧಿಸಿದ ಪೊಲೀಸರು

- Advertisement -
- Advertisement -

ಸುಳ್ಯ: ಬೆಳ್ಳಾರೆಯಲ್ಲಿ ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಕೊಡಿಯಾಲದ ಚೇತನ್ ಕಾಯರ್ತಡ್ಕ, ದರ್ಶನ್ ಕಾಯರ್ತಡ್ಕ ಬಂಧಿತ ಆರೋಪಿಗಳು.

ಸುಳ್ಯ ತಾಲೂಕಿನ ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ನಡೆಸಲಾಗಿದೆ ಎಂದು ಬಾಲಕಿಯ ತಂದೆ ಬೆಳ್ಳಾರೆ ಠಾಣೆಗೆ ದೂರು ನೀಡಿದ್ದರು.ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಕಲ್ಮಡ್ಕದ ಚಿದಾನಂದ ಎಂಬಾತನನ್ನು ಬಂಧಿಸಿದ್ದರು.ಈ ಕುರಿತು ಹೆಚ್ಚಿನ ವಿಚಾರಣೆ ನಡೆಸಿದಾಗ ಬಾಲಕಿ ಇನ್ನಿಬ್ಬರು ಅತ್ಯಾಚಾರ ಎಸಗಿದ್ದಾರೆ ಎಂದು ಹೇಳಿದ ಹಿನ್ನೆಲೆಯಲ್ಲಿ ಇನ್ನಿಬ್ಬರನ್ನು ಬಂಧಿಸಿದ್ದಾರೆ.

ಆರೋಪಿಗಳ ವಿರುದ್ಧ ಬೆಳ್ಳಾರೆ ಪೊಲೀಸರು ಫೋಕ್ಸೋ ಪ್ರಕರಣದ ದಾಖಲಿಸಿದ್ದಾರೆ.

- Advertisement -

Latest News

error: Content is protected !!