Thursday, June 25, 2026
Homeಕರಾವಳಿದಕ್ಷಿಣ ಕನ್ನಡದಲ್ಲಿ ಕೊರೋನಾ ರಣಕೇಕೆ: ಇಂದು ಬೆಳಿಗ್ಗೆಯೇ ಇಬ್ಬರು ಬಲಿ!

ದಕ್ಷಿಣ ಕನ್ನಡದಲ್ಲಿ ಕೊರೋನಾ ರಣಕೇಕೆ: ಇಂದು ಬೆಳಿಗ್ಗೆಯೇ ಇಬ್ಬರು ಬಲಿ!

- Advertisement -
- Advertisement -

ಮಂಗಳೂರು: ಕೊರೋನಾ ಮಹಾಮಾರಿ ಅಟ್ಟಹಾಸಕ್ಕೆ ದಕ್ಷಿಣಕನ್ನಡ ಜಿಲ್ಲೆಯಲ್ಲಿಂದು 2 ಬಲಿಯಾಗಿದೆ. ಬಂಟ್ವಾಳ ಮೂಲದ 57 ವರ್ಷದ ವೃದ್ದೆ ಹಾಗೂ ಸುರತ್ಕಲ್‌ನ ಇಡ್ಯಾ ನಿವಾಸಿ 31 ವರ್ಷದ ಯುವಕ ಕೊರೊನಾ ಸೋಂಕಿನಿಂದಾಗಿ ಸಾವನ್ನಪ್ಪಿದ್ದಾರೆ.

ಕೊರೊನಾ ಸೋಂಕು ದೃಢಪಟ್ಟಿದ್ದ ಮಹಿಳೆಯು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಹಾಗೂ ಯುವಕ ಸರ್ಕಾರಿ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಭಾನುವಾರ ಇಬ್ಬರು ಕೂಡಾ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಜೂನ್ 24ರಂದು 10ನೇ ಸಾವು ಸಂಭವಿಸಿತ್ತು. ಇದೀಗ ನಾಲ್ಕೇ ದಿನಗಳ ಅಂತರದಲ್ಲಿ ಮತ್ತೆ ಇಬ್ಬರು ಮೃತಪಟ್ಟಿದ್ದಾರೆ.

ದ.ಕ ದಲ್ಲಿ ಸಾವಿನ ಸಂಖ್ಯೆ 12 ಕ್ಕೆ ಏರಿಕೆಯಾಗಿದೆ

- Advertisement -

Latest News

error: Content is protected !!