Wednesday, June 3, 2026
Homeಇತರರಾಜ್ಯದಲ್ಲಿ ಇನ್ನು ಎರಡು ದಿನ ಮಳೆ ಸಾಧ್ಯತೆ....! ಕರಾವಳಿಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ...!

ರಾಜ್ಯದಲ್ಲಿ ಇನ್ನು ಎರಡು ದಿನ ಮಳೆ ಸಾಧ್ಯತೆ….! ಕರಾವಳಿಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ…!

- Advertisement -
- Advertisement -

ಮಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ 2 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಂಗಾಳ ಕೊಲ್ಲಿಯಲ್ಲಿನ ಚಂಡ ಮಾರುತ ಹಾಗೂ ಮುಂಗಾರು ಚುರುಕುಗೊಂಡ ಹಿನ್ನೆಲೆಯಲ್ಲಿ ರಾಜ್ಯದ ಕರಾವಳಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಇಂದು ಮತ್ತು ನಾಳೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಹಾವೇರಿ, ಕೊಪ್ಪಳ, ಕಲಬುರಗಿ, ರಾಯಚೂರು, ಯಾದಗಿರಿ ಮತ್ತು ಧಾರವಾಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ನಿರೀಕ್ಷೆ ಇದ್ದು, ಕರಾವಳಿ ಭಾಗಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

- Advertisement -

Latest News

error: Content is protected !!