Wednesday, June 24, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಇಬ್ಬರು ನಕ್ಸಲರು ಎರಡು ದಿನ ಬೆಳ್ತಂಗಡಿ ಪೊಲೀಸ್ ಕಸ್ಟಡಿಗೆ

ಬೆಳ್ತಂಗಡಿ : ಇಬ್ಬರು ನಕ್ಸಲರು ಎರಡು ದಿನ ಬೆಳ್ತಂಗಡಿ ಪೊಲೀಸ್ ಕಸ್ಟಡಿಗೆ

- Advertisement -
- Advertisement -

ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದಲ್ಲಿ ಭಾರಿ ಸ್ಫೋಟಕ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ದಿನ ಕಾಲ ಅಂದರೆ ಎ.9 ವರೆಗೆ ಬೆಳ್ತಂಗಡಿ ಪೊಲೀಸ್ ಕಸ್ಟಡಿಗೆ ನಕ್ಸಲ್ ನಾಯಕರಾದ ಬಿ.ಜಿ.ಕೃಷ್ಣಮೂರ್ತಿ(50) ಮತ್ತು ಸಾವಿತ್ರಿ(36) ಯನ್ನು ನೀಡುವಂತೆ ಬೆಳ್ತಂಗಡಿ ಪ್ರಧಾನ ವ್ಯವಹಾರಿಕ ನ್ಯಾಯಾಧೀಶರು  ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಯ ನ್ಯಾಯಾಧೀಶರು ಸಂದೇಶ್.ಕೆ  ಆದೇಶ ಹೊರಡಿಸಿದರು. ಇಬ್ಬರನ್ನು ಬಂಟ್ವಾಳ ಡಿವೈಎಸ್ಪಿ ವಿಜಯ ಪ್ರಸಾದ್ ವಶಕ್ಕೆ ನೀಡಿದ್ದಾರೆ. ಉಳಿದ ಎರಡು ಪ್ರಕರಣದಲ್ಲಿ ಏ.9 ರಂದು  ನ್ಯಾಯಲಯಕ್ಕೆ ಹಾಜರುಪಡಿಸಿ, ಬಳಿಕ  ವೇಣೂರು ಮತ್ತು ಧರ್ಮಸ್ಥಳ ಪೊಲೀಸರು ಕಸ್ಟಡಿಗೆ ಪಡೆಯಲಿದ್ದಾರೆ

- Advertisement -

Latest News

error: Content is protected !!