- Advertisement -
- Advertisement -
ಚಿಕ್ಕಮಗಳೂರು: ಕಳೆದ ಕೆಲವು ದಿನಗಳಿಂದ ಮಲೆನಾಡು ಭಾಗ ಹಾಗೂ ಕಾರ್ಕಳ ಭಾಗದಲ್ಲಿ ನಕ್ಸಲರು ಕಾಣಿಸಿಕೊಂಡಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದ್ದು, ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಇಬ್ಬರು ನಕ್ಸಲ್ ಅನುಕಂಪಿತರನ್ನು ಪೊಲೀಸ್ ಠಾಣೆಗೆ ಕರೆತಂದು ವಿಚಾರಣೆಗೆ ಒಳಪಡಿಸಿದ್ದಾರೆ ಎನ್ನಲಾಗಿದೆ.
ಶೃಂಗೇರಿ ತಾಲೂಕು ನೆಮ್ಮಾರ್ ಸಮೀಪದ ಬುಕಡಿಬೈಲಿನಲ್ಲಿ ಸೋಮವಾರದಂದು ಇಬ್ಬರು ನಕ್ಸಲ್ ಅನುಕಂಪಿತ ವ್ಯಕ್ತಿಗಳನ್ನು ಪೊಲೀಸ್ ಠಾಣೆಗೆ ಕರೆತಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ವಿಕ್ರಮ್ ಅಮಟೆ ನೇತೃತ್ವದಲ್ಲಿ ಕೆಲವು ಗಂಟೆಗಳ ಕಾಲ ವಿಚಾರಣೆ ನಡೆಸಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.
ಇನ್ನು ಪೊಲೀಸ್ ಇಲಾಖೆ ಮತ್ತು ನಕ್ಸಲ್ ನಿಗ್ರಹ ಪಡೆಯ ಸಿಬ್ಬಂದಿಗಳು ಕಾರ್ಕಳ ತಾಲೂಕಿನಲ್ಲಿ ನಕ್ಸಲ್ ಕಾಣಿಸಿಕೊಂಡಿರುವ ಸುದ್ದಿ ಹಿನ್ನೆಲೆಯಲ್ಲಿ ಜಿಲ್ಲೆಯ ಮಲೆನಾಡು ಭಾಗದಲ್ಲಿ ಹದ್ದಿನ ಕಣ್ಣಿಟ್ಟಿದ್ದರು ಎನ್ನಲಾಗಿದೆ.
- Advertisement -