- Advertisement -
- Advertisement -
ಮಂಗಳೂರು: ಎರಡು ಖಾಸಗಿ ಬಸ್ ಗಳ ನಡುವೆ ಅಪಘಾತ ಸಂಭವಿಸಿರುವ ಘಟನೆ ಮಂಗಳೂರು ನಗರದ ಜ್ಯೋತಿ ಸರ್ಕಲ್ ನಲ್ಲಿ ನಡೆದಿದೆ.
ಸ್ಟೇಟ್ ಬ್ಯಾಂಕ್ ನಿಂದ ಕಂಕನಾಡಿ ಕಡೆಗೆ ತೆರಳುತ್ತಿದ್ದ ಬಸ್ ಮತ್ತು ಬಂಟ್ಸ್ ಹಾಸ್ಟೆಲ್ ನಿಂದ ಸ್ಟೇಟ್ ಬ್ಯಾಂಕ್ ಕಡೆಗೆ ಹೋಗುತ್ತಿದ್ದ ಬಸ್‌ಗಳ ನಡುವೆ ಡಿಕ್ಕಿ ಸಂಭವಿಸಿದೆ.
ಅಪಘಾತದಲ್ಲಿ ಬಸ್ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದು, ಡಿಕ್ಕಿಯ ರಭಸಕ್ಕೆ ಬಸ್ ನ ಮುಂಭಾಗ ಜಖಂಗೊಂಡಿದೆ. ಕಂಕನಾಡಿ ಸಂಚಾರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.
- Advertisement -