Wednesday, June 24, 2026
Homeಕರಾವಳಿಉಳ್ಳಾಲ: ಸಮುದ್ರ ತೀರದಲ್ಲಿ ಆಟವಾಡುತ್ತಿದ್ದ ವಿದ್ಯಾರ್ಥಿಗಳು ನೀರು ಪಾಲು

ಉಳ್ಳಾಲ: ಸಮುದ್ರ ತೀರದಲ್ಲಿ ಆಟವಾಡುತ್ತಿದ್ದ ವಿದ್ಯಾರ್ಥಿಗಳು ನೀರು ಪಾಲು

- Advertisement -
- Advertisement -

ಮಂಗಳೂರು: ಸಮುದ್ರ ತೀರದಲ್ಲಿ ಆಟವಾಡುತ್ತಿದ್ದ ವೇಳೆ ಇಬ್ಬರು ವಿದ್ಯಾರ್ಥಿಗಳು ಸಮುದ್ರ ಪಾಲಾದ ಘಟನೆ ಸೋಮೇಶ್ವರ ಬಳಿ ನಡೆದಿದೆ.

ಆಟವಾಡುತ್ತಿದ್ದ ಸಮಯದಲ್ಲಿ ಅಪ್ಪಳಿಸಿದ ಸಮುದ್ರದ ಅಲೆಗಳ ನಡುವೆ ಸಿಲುಕಿ ಇಬ್ಬರು ವಿದ್ಯಾರ್ಥಿಗಳು ನೀರು ಪಾಲಾಗಿದ್ದಾರೆ.

ಉಳ್ಳಾಲ ತಾಲೂಕಿನ ಸೋಮೇಶ್ವರದ ಪರಿಜ್ಞಾನ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಾದ ಯಶ್ವಿತ್ ಮತ್ತು ಯುವರಾಜ್ ಸಮುದ್ರಪಾಲಾದ ವಿದ್ಯಾರ್ಥಿಗಳಾಗಿದ್ದಾರೆ.

ಉಳ್ಳಾಲ ಪೊಲೀಸ್ ಠಾಣೆಯ ಸಿಬ್ಬಂದಿ ಮತ್ತು ಸ್ಥಳೀಯ ಈಜುಗಾರರಿಂದ ಕಾರ್ಯಾಚರಣೆ ನಡೆದಿದ್ದು, ಇಬ್ಬರು ವಿದ್ಯಾರ್ಥಿಗಳು ಮಂಜೇಶ್ವರದ ಕುಂಜತ್ತೂರು ಮತ್ತು ಅಡ್ಕ ನಿವಾಸಿಗಳು ಎಂದು ಹೇಳಲಾಗಿದೆ.

ಉಳ್ಳಾಲ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ಸಂಭವಿಸಿದೆ.

- Advertisement -

Latest News

error: Content is protected !!