Thursday, September 17, 2026
Homeಪ್ರಮುಖ-ಸುದ್ದಿಜಮ್ಮು ಕಾಶ್ಮೀರದಲ್ಲಿ ಭದ್ರತಾ ಪಡೆಗಳ ಕಾರ್ಯಾಚರಣೆ; ಇಬ್ಬರು ಶಂಕಿತ ಉಗ್ರರ ಹತ್ಯೆ

ಜಮ್ಮು ಕಾಶ್ಮೀರದಲ್ಲಿ ಭದ್ರತಾ ಪಡೆಗಳ ಕಾರ್ಯಾಚರಣೆ; ಇಬ್ಬರು ಶಂಕಿತ ಉಗ್ರರ ಹತ್ಯೆ

- Advertisement -
- Advertisement -

ಜಮ್ಮು-ಕಾಶ್ಮೀರ : ಜಮ್ಮು-ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ಬುಧವಾರ ತಡರಾತ್ರಿ ನಡೆದ ಭದ್ರತಾ ಕಾರ್ಯಾಚರಣೆಯಲ್ಲಿ ಪಾಕಿಸ್ತಾನ ಮೂಲದ ಜೈಶ್-ಎ-ಮೊಹಮ್ಮದ್ (ಜೆಇಎಂ) ಸಂಘಟನೆಗೆ ಸೇರಿದವರು ಎನ್ನಲಾದ ಇಬ್ಬರು ಶಂಕಿತ ಉಗ್ರರು ಹತರಾಗಿದ್ದಾರೆ. ಮೃತರ ಗುರುತು ಪತ್ತೆ ಕಾರ್ಯ ಮುಂದುವರಿದಿದೆ.

ಸೋಹನ್ ಪ್ರದೇಶದಲ್ಲಿ ಕೆಲವರು ಅನುಮಾನಾಸ್ಪದವಾಗಿ ಸಂಚರಿಸುತ್ತಿರುವ ಕುರಿತು ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ರಾಷ್ಟ್ರೀಯ ರೈಫಲ್ಸ್, ಪ್ಯಾರಾ ವಿಶೇಷ ಪಡೆಗಳು ಹಾಗೂ ಜಮ್ಮು ಕಾಶ್ಮೀರ ಪೊಲೀಸರು ಜಂಟಿಯಾಗಿ ವ್ಯಾಪಕ ಶೋಧ ಕಾರ್ಯಾಚರಣೆ ಆರಂಭಿಸಿದ್ದರು. ಈ ವೇಳೆ ಭದ್ರತಾ ಪಡೆಗಳು ಮತ್ತು ಶಂಕಿತ ಉಗ್ರರ ನಡುವೆ ತೀವ್ರ ಗುಂಡಿನ ಚಕಮಕಿ ನಡೆದಿದೆ.

ಗುರುವಾರ ಮುಂಜಾನೆ ಕಾರ್ಯಾಚರಣೆ ನಡೆದ ಸ್ಥಳದಲ್ಲಿ ಇಬ್ಬರ ಮೃತದೇಹಗಳು ಪತ್ತೆಯಾಗಿದ್ದು, ಅವರು ವಿದೇಶಿಯರಾಗಿರಬಹುದು ಹಾಗೂ ಜೈಶ್-ಎ-ಮೊಹಮ್ಮದ್ ಸಂಘಟನೆಗೆ ಸೇರಿದವರಾಗಿರುವ ಸಾಧ್ಯತೆಯಿದೆ ಎಂದು ಭದ್ರತಾ ಮೂಲಗಳು ಶಂಕಿಸಿವೆ. ಸ್ಥಳದಿಂದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.

- Advertisement -

Latest News

error: Content is protected !!