Tuesday, October 6, 2026
Homeಕರಾವಳಿಉಡುಪಿ18 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ವಾರಂಟ್ ಆರೋಪಿಗಳ ಬಂಧನ

18 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ವಾರಂಟ್ ಆರೋಪಿಗಳ ಬಂಧನ

- Advertisement -
- Advertisement -

ಮಣಿಪಾಲ: ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 18 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಇಬ್ಬರು ವಾರಂಟ್ ಆರೋಪಿಗಳನ್ನು ಮಣಿಪಾಲ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಆರೋಪಿಗಳಾದ ಮಹಮ್ಮದ್ ಹನೀಫ್ ಹಾಗೂ ಫಯಾಜ್ ಮಹಮ್ಮದ್ ಅವರನ್ನು ಮಣಿಪಾಲ ಠಾಣೆಯ ಹೆಡ್ ಕಾನ್‌ಸ್ಟೆಬಲ್‌ಗಳಾದ ಚೇತನ್ ಮತ್ತು ಮಂಜುನಾಥ ಅವರು ಉಳ್ಳಾಲ ಹಾಗೂ ತಲಪಾಡಿ ಪ್ರದೇಶಗಳಲ್ಲಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬಳಿಕ ಇಬ್ಬರನ್ನೂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ವಿಚಾರಣೆ ನಡೆಸಿದ ನ್ಯಾಯಾಲಯವು ತಲಾ 10 ಸಾವಿರ ರೂ. ದಂಡ ವಿಧಿಸಿ ಪ್ರಕರಣವನ್ನು ಮುಕ್ತಾಯಗೊಳಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

Latest News

error: Content is protected !!