Thursday, June 4, 2026
Homeಕರಾವಳಿಉಡುಪಿಉಡುಪಿ; ಮೀನುಗಾರಿಕೆಗೆ ತೆರಳಿದ್ದ ಇಬ್ಬರು ಯುವಕರು ನೀರುಪಾಲು

ಉಡುಪಿ; ಮೀನುಗಾರಿಕೆಗೆ ತೆರಳಿದ್ದ ಇಬ್ಬರು ಯುವಕರು ನೀರುಪಾಲು

- Advertisement -
- Advertisement -

ಉಡುಪಿ; ಮೀನುಗಾರಿಕೆಗೆ ತೆರಳಿದ್ದ ಇಬ್ಬರು ಯುವಕರು ನೀರುಪಾಲಾಗಿರುವ ಘಟನೆ ಉಡುಪಿಯ ಶಿರೂರು ಭಾಗದ ಅಳ್ವೆಗದ್ದೆಯಲ್ಲಿ ನಡೆದಿದೆ.

ಬೈಂದೂರು ತಾಲೂಕಿನ ಶಿರೂರು ಗ್ರಾಮದ ಕೆಸರಕೋಡಿ ನಿವಾಸಿಗಳಾದ ಗಂಗೊಳ್ಳಿ ಮುಸಾಬ್(22) ಹಾಗೂ ನಝಾನ್(24) ಮೃತಪಟ್ಟ ದುದೈವಿಗಳಾಗಿದ್ದಾರೆ.

ಇಬ್ಬರು  ನಿನ್ನೆ ಸಂಜೆ ಮೀನುಗಾರಿಕೆಗೆ ತೆರಳಿದ್ದರು. ಸಮುದ್ರ ಪ್ರಕ್ಷುಬ್ದವಾಗಿ ಇರುವ ಕಾರಣ ಇಬ್ಬರು ಮೀನುಗಾರರು ಆಯತಪ್ಪಿ ಬಿದ್ದು ಸಮುದ್ರ ಪಾಲಾಗಿದ್ದಾರೆ.ತಕ್ಷಣ ಸ್ಥಳೀಯ ಮೀನುಗಾರರು ಅವರನ್ನು ರಕ್ಷಿಸಲು ಪ್ರಯತ್ನಿಸಿದರೂ ಸಾಧ್ಯವಾಗಿಲ್ಲ. ಘಟನಾ ಸ್ಥಳಕ್ಕೆ ಬೈಂದೂರು ಠಾಣಾಧಿಕಾರಿ ನಿರಂಜನ ಗೌಡ,ಅಗ್ನಿಶಾಮಕ ದಳ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.

- Advertisement -

Latest News

error: Content is protected !!