Thursday, June 4, 2026
Homeಅಪರಾಧಕೊಡಗು: ಯುವಕರಿಬ್ಬರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

ಕೊಡಗು: ಯುವಕರಿಬ್ಬರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

- Advertisement -
- Advertisement -

ಮಡಿಕೇರಿ: ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನಲ್ಲಿ ಯುವಕರಿಬ್ಬರ ಮೇಲೆ‌ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಸಾಗರ್ (25) ಚೇತನ್ (24) ಎಂಬ ಇಬ್ಬರು ಯುವಕರ ಮೇಲೆ ಹಲ್ಲೆ ನಡೆದಿದೆ. ಕಾರಿನಲ್ಲಿ ಅಪಘಾತ ಮಾಡಿ ಬಳಿಕ ಮಾರಕಾಯುಧಗಳಿಂದ ಹಲ್ಲೆ ನಡೆಸಲಾಗಿದೆ ಎಂದು ಹೇಳಲಾಗಿದೆ.

ಅಪಘಾತದ ದೃಷ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಕುಶಾಲನಗರ ತಾಲ್ಲೂಕಿನ ಮುಳ್ಳುಸೋಗೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಹಲ್ಲೆಯಿಂದಾಗಿ ಗಂಭೀರ ಗಾಯಗೊಂಡಿರುವ ಇಬ್ಬರು ಯುವಕರನ್ನು ಮೈಸೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಕುಶಾಲನಗರ ಪಟ್ಟಣ ಪೊಲೀಸರಿಂದ ಸ್ಥಳ‌ ಮಹಜರು ನಡೆಯಲ್ಪಟ್ಟಿದೆ. ಹಲ್ಲೆ ನಡೆಸಲು ನಿರ್ದಿಷ್ಟ ಕಾರಣ ಏನೆಂಬುದು ಇನ್ನಷ್ಟೇ ತಿಳಿಯಬೇಕಾಗಿದೆ.

- Advertisement -

Latest News

error: Content is protected !!