- Advertisement -
- Advertisement -
ಸುಳ್ಯ: ತಾಲೂಕಿನ ಕಲ್ಮಡ್ಕ ಗ್ರಾಮದ ಬೊಮ್ಮೆಟ್ಟಿ ಪ್ರದೇಶದಲ್ಲಿ ಸಂಭವಿಸಿದ ದಾರುಣ ದುರಂತವೊಂದರಲ್ಲಿ ವಿದ್ಯುತ್ ಶಾಕ್ ತಗುಲಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಕ್ಟೋಬರ್ 12ರ ತಡರಾತ್ರಿ ಈ ಘಟನೆ ನಡೆದಿದ್ದು, ಮತ್ತೋರ್ವ ಬಾಲಕ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬೊಮ್ಮೆಟ್ಟಿ ನಿವಾಸಿಗಳಾದ ಗಣೇಶ್ ಹಾಗೂ ಭರತ್ ಮೃತ ದುರ್ದೈವಿಗಳೆಂದು ಗುರುತಿಸಲಾಗಿದೆ. ತಡರಾತ್ರಿ ನಡೆದ ಈ ಅನಾಹುತದಲ್ಲಿ ಬಾಲಕನೊಬ್ಬ ಗಾಯಗೊಂಡಿದ್ದು, ಆತನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ವಿದ್ಯುತ್ ಆಘಾತ ಸಂಭವಿಸಲು ನಿಖರ ಕಾರಣವೇನು ಎಂಬ ಬಗ್ಗೆ ಹೆಚ್ಚಿನ ವಿವರಗಳು ಇನ್ನಷ್ಟೇ ತಿಳಿದುಬರಬೇಕಿದೆ.
- Advertisement -


