Saturday, June 13, 2026
Homeಕರಾವಳಿಉಡುಪಿ: ಮಾಜಿ ಶಾಸಕ ಯು.ಆರ್ ಸಭಾಪತಿ ನಿಧನ

ಉಡುಪಿ: ಮಾಜಿ ಶಾಸಕ ಯು.ಆರ್ ಸಭಾಪತಿ ನಿಧನ

- Advertisement -
- Advertisement -

ಉಡುಪಿ;  ಹಿರಿಯ ರಾಜಕಾರಣಿ ಮಾಜಿ ಶಾಸಕ ಯು.ಆರ್ ಸಭಾಪತಿ(71) ಇಂದು ನಿಧನರಾಗಿದ್ದಾರೆ. ಅಲ್ಪಕಾಲದ ಅಸೌಖ್ಯದಿಂದ ಬಳಲುತ್ತಿದ್ದ ಅವರು ಇಂದು ನಿಧನರಾಗಿದ್ದಾರೆ.
ಉಡುಪಿ ಬಡಗುಪೇಟೆ ನಿವಾಸಿಯಾಗಿದ್ದ ಅವರು ಜಿಲ್ಲೆಯ ರಾಜಕೀಯ ಕ್ಷೇತ್ರದಲ್ಲಿ ಪ್ರಮುಖ ನಾಯಕರಾಗಿ ಗುರುತಿಸಿಕೊಂಡಿದ್ದರು. 1952 ರಲ್ಲಿ ಹುಟ್ಟಿದ ಅವರು,1994 ರಲ್ಲಿ ಕರ್ನಾಟಕ ಕಾಂಗ್ರೆಸ್ ಪಕ್ಷದಿಂದ(ಕೆಸಿಪಿ) ಚುನಾಯಿತರಾಗಿ ವಿಧಾನಸಭೆ ಪ್ರವೇಶಿಸಿದ್ದರು. ಅನಂತರ ಕೆಸಿಪಿ ಕಾಂಗ್ರೆಸ್ ನೊಂದಿಗೆ ವಿಲೀನಗೊಂಡಿತ್ತು. 1999ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದು ಎಂಎಲ್ ಎ ಆಗಿ ಮರು ಆಯ್ಕೆಯಾಗಿದ್ದರು. ಅನಂತರ ಜಿಲ್ಲೆಯ ರಾಜಕಾರಣದಲ್ಲಿ ಸಕ್ರಿಯರಾಗಿ ತೊಡಗಿಸಿಕೊಂಡಿದ್ದರು.

- Advertisement -

Latest News

error: Content is protected !!