Friday, May 3, 2024
Homeಕರಾವಳಿಉಡುಪಿಉಡುಪಿ; ಕೃಷ್ಣ ಜನ್ಮಾಷ್ಟಮಿಯಂದು ಕೃಷ್ಣಮಠಕ್ಕೆ ಭೇಟಿ ಕೊಟ್ಟು ಅಚ್ಚರಿ ಮೂಡಿಸಿದ ಯು ಟಿ ಖಾದರ್ ;...

ಉಡುಪಿ; ಕೃಷ್ಣ ಜನ್ಮಾಷ್ಟಮಿಯಂದು ಕೃಷ್ಣಮಠಕ್ಕೆ ಭೇಟಿ ಕೊಟ್ಟು ಅಚ್ಚರಿ ಮೂಡಿಸಿದ ಯು ಟಿ ಖಾದರ್ ; ಮತ್ತೊಮ್ಮೆ ಸರ್ವಧರ್ಮ ಸಮಾನತೆಯ ಸಂದೇಶ ಸಾರಿದ ವಿಧಾನಸಭಾ ಸ್ಪೀಕರ್

spot_img
- Advertisement -
- Advertisement -

ಉಡುಪಿ; ಕೃಷ್ಣ ಜನ್ಮಾಷ್ಟಮಿಯಂದು ಕೃಷ್ಣಮಠಕ್ಕೆ ಭೇಟಿ ಕೊಟ್ಟು ಸ್ಪೀಕರ್ ಯು ಟಿ ಖಾದರ್ ಅಚ್ಚರಿ ಮೂಡಿಸಿದ್ದಾರೆ.ಅದು ಮಧ್ಯರಾತ್ರಿ ಸಮಯದಲ್ಲೇ ಉಡುಪಿ ಕೃಷ್ಣ ಮಠಕ್ಕೆ ಆಕಸ್ಮಿಕವಾಗಿ ಭೇಟಿ ನೀಡಿ ಸ್ಪೀಕರ್ ಸರ್ವಧರ್ಮ ಸಮಾನತೆಯ ಸಂದೇಶ ಸಾರಿದ್ದಾರೆ.

ಇನ್ನೊಂದು ಗಮನಾರ್ಹ ವಿಚಾರವೆಂದರೆ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯ 13 ಶಾಸಕರ ಪೈಕಿ ಮಂಗಳೂರು ವಿಧಾನಸಭಾ ಕ್ಷೇತ್ರದ ಶಾಸಕ, ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಉಡುಪಿ ಮಠಕ್ಕೆ ಭೇಟಿ ನೀಡಿ ದೇವರ ಕೃಪೆಗೆ ಪಾತ್ರರಾದ ಏಕೈಕ ಶಾಸಕರಾಗಿದ್ದಾರೆ.

ಇನ್ನು ಖಾದರ್ ಮಠಕ್ಕೆ ಭೇಟಿ ನೀಡುತ್ತಿದ್ದಂತೆ ಮಠದ ಸತ್ಯನಾರಾಯಣ ಭಟ್ ಅವರು ಅವರನ್ನು ಬರಮಾಡಿಕೊಂಡರು. ಮಠದ ಕೊಳದಲ್ಲಿ ಕೈ ಕಾಲು ತೊಳೆದು ಮಠದೊಳಗೆ ಭೇಟಿ ನೀಡಿದ ಯು.ಟಿ.ಖಾದರ್ ಅವರನ್ನು ಸತ್ಯನಾರಾಯಣ ಭಟ್ ಮತ್ತು ಸಮಿತಿಯವರು ಶಾಲು ಹೊದಿಸಿ ಸ್ವಾಗತಿಸಿದರು. ಪ್ರಸಾದವನ್ನು ನೀಡಿ ಹರಸಿದರು.

 ಬುಧವಾರ ಬೆಳಿಗ್ಗೆ ಬೆಂಗಳೂರು ಕಾರ್ಯಕ್ರಮ ಮುಗಿಸಿ ಮಂಗಳೂರಿಗೆ ಬಂದು ತನ್ನ ಕ್ಷೇತ್ರದಲ್ಲಿ ವಿವಿಧೆಡೆ ಕೃಷ್ಣಾಷ್ಟಮಿ, ಮೊಸರು ಕುಡಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಉಡುಪಿಯ ಕಡಿಯಾಲಿನಲ್ಲಿ ಪ್ರಸಾದ್ ಕಾಂಚನ್ ನೇತೃತ್ವದಲ್ಲಿ ಶಶಿರಾಜ್ ಕುಂದರ್ ಮತ್ತು ತಂಡದಿಂದ ಟೈಗರ್ ಫ್ರೆಂಡ್ಸ್ ನ ಹುಲಿವೇಷ ಪ್ರದರ್ಶನ ಸ್ಪರ್ಧೆಯಲ್ಲಿ ಪಾಲ್ಗೊಂಡು ಹಿಂತಿರುಗುವಾಗ ಹಿತೈಷಿಗಳ ಕೋರಿಕೆ ಮೇರೆಗೆ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದರು. ವಿಶೇಷವೆಂದರೆ ಕಾಕತಾಳೀಯವೆಂಬಂತೆ ಭೇಟಿ ನೀಡಿದ ಅದೇ ಗಳಿಗೆಯಲ್ಲಿ ಶ್ರೀಕೃಷ್ಣ ಜನ್ಮ ತಾಳಿದ್ದರು ಎಂದು ಮಠದ ಸತ್ಯನಾರಾಯಣ ಭಟ್ ಉಲ್ಲೇಖಿಸಿದರು. ಈ ಭಾಗ್ಯ ಎಲ್ಲರಿಗೂ ಪ್ರಾಪ್ತವಾಗದು. ಎರಡೂ ಜಿಲ್ಲೆಯ 13 ಶಾಸಕರ ಪೈಕಿ 11 ಮಂದಿ ಬಿಜೆಪಿ ಶಾಸಕರಿದ್ದರೂ ಅವರ್ಯಾರಿಗೂ ಸಿಗದ ಭಾಗ್ಯ ಸ್ಪೀಕರ್ ಖಾದರ್ ಗೆ ಲಭಿಸಿದ್ದು ಕಾಕತಾಳೀಯ.

 ಸ್ಪೀಕರ್ ಅವರೊಂದಿಗೆ ಕೌನ್ಸಿಲರ್ ಭಾಸ್ಕರ ರಾವ್ ಕಿದಿಯೂರ್, ರಮೇಶ್ ಕಾಂಚನ್, ಮುನಿಯಾಲ ಉದಯಕುಮಾರ್ ಶೆಟ್ಟಿ, ಮುಸ್ತಫ ಹರೇಕಳ, ಬದ್ರುದ್ದೀನ್ ಜೊತೆಗಿದ್ದರು.

- Advertisement -
spot_img

Latest News

error: Content is protected !!