ಮಂಗಳೂರು : ಹರೇಕಳ ಅಣೆಕಟ್ಟು – ಸೇತುವೆಯಿಂದಾಗಿ ಮುಳುಗಡೆ ಭೀತಿ ಎದುರಿಸುತ್ತಿರುವ ಪಾವೂರು ಗ್ರಾಮದ ಉಳಿಯ ದ್ವೀಪಕ್ಕೆ ರಾಜ್ಯ ವಿಧಾನಸಭೆಯ ವಿಪಕ್ಷ ಉಪ ನಾಯಕ ಯು.ಟಿ.ಖಾದರ್ ಅವರು ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು ಹಾಗೂ ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ನಂತರ ಯು.ಟಿ.ಖಾದರ್ ಅವರು ಉಳಿಯ ಪ್ರದೇಶದ ಚರ್ಚ್ ಗೆ ಭೇಟಿ ನೀಡಿ, ಚರ್ಚ್ ನ ಮುಖ್ಯ ಗುರುಗಳು ಹಾಗೂ ಸ್ಥಳೀಯರ ಅಹವಾಲು ಸ್ವೀಕರಿಸಿದರು. ಈ ಸಂದರ್ಭ ಅಣೆಕಟ್ಟುನಿಂದ ದ್ವೀಪಕ್ಕೆ ಯಾವುದೇ ರೀತಿಯ ತೊಂದರೆಯಾಗದಂತೆ ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಪರಿಹಾರ ಕಂಡುಕೊಳ್ಳಲು ಮತ್ತು ಉಳಿಯ ಪ್ರದೇಶದ ಜನರ ಓಡಾಟದ ಅನುಕೂಲಕ್ಕಾಗಿ ಪಾದಚಾರಿ ಸೇತುವೆ ನಿರ್ಮಾಣದ ಕುರಿತು ಸಮೀಕ್ಷೆ ನಡೆಸಲು ಯು.ಟಿ. ಖಾದರ್ ಸೂಚನೆ ನೀಡಿದರು.
ಈ ಬಗ್ಗೆ ಅತೀ ಶೀಘ್ರದಲ್ಲಿ ಉನ್ನತ ಮಟ್ಟದ ಅಧಿಕಾರಿಗಳ ತಂಡ ಕೂಡಾ ಉಳಿಯ ಪ್ರದೇಶಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಲಿದ್ದಾರೆ ಎಂದು ಹೇಳಿದರು.


