Thursday, June 4, 2026
Homeಕರಾವಳಿಉಡುಪಿಉದಯ್ ಗಾಣಿಗ ಕೊಲೆ ಪ್ರಕರಣ: ಪ್ರಮುಖ ಆರೋಪಿಗಳನ್ನು ಬಂಧಿಸಿದ ಪೊಲೀಸರು

ಉದಯ್ ಗಾಣಿಗ ಕೊಲೆ ಪ್ರಕರಣ: ಪ್ರಮುಖ ಆರೋಪಿಗಳನ್ನು ಬಂಧಿಸಿದ ಪೊಲೀಸರು

- Advertisement -
- Advertisement -

ಕುಂದಾಪುರ: ಶಂಕರನಾರಾಯಣ ಪೊಲೀಸ್‌ ಠಾಣೆ ವ್ಯಾಪ್ತಿಯ ಯಡಮೊಗೆ ಯಲ್ಲಿ ಶನಿವಾರ ರಾತ್ರಿ ನಡೆದ ಸಾಮಾಜಿಕ ಕಾರ್ಯಕರ್ತ ಉದಯ್ ಗಾಣಿಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರಕರಣದ ಮೊದಲನೇ ಆರೋಪಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪ್ರಾಣೇಶ್ ಯಡಿಯಾಳ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಧೀಶರು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.

ಎರಡನೇ ಆರೋಪಿ ರಾಜೇಶ್ ಭಟ್ ಹಾಗೂ ಕೃತ್ಯಕ್ಕೆ ಕುಮ್ಮಕ್ಕು ನೀಡಿದ ಆರೋಪವನ್ನು ಎದುರಿಸುತ್ತಿರುವ ಬಿಜೆಪಿ ಮುಖಂಡ ಬಾಲಚಂದ್ರ ಭಟ್ ಅವರನ್ನು ಸೋಮವಾರ ರಾತ್ರಿ ಪೊಲೀಸರು ಬಂಧಿಸಿದ್ದಾರೆ. ಇಂದು  ನ್ಯಾಯಾಲಯಕ್ಕೆ ಹಾಜರು ಪಡಿಸುವ ಸಾಧ್ಯತೆ ಇದೆ.

ಇನ್ನು ಘಟನೆ ನಡೆದ ಸ್ಥಳಕ್ಕೆ ನಿನ್ನೆ ಸಂಜೆ ಭೇಟಿ ನೀಡಿದ ಎಸ್ಪಿ ವಿಷ್ಣುವರ್ಧನ್, ಪ್ರಕರಣದ ಬಗ್ಗೆ ಮಾಹಿತಿ ಪಡೆದರು.

- Advertisement -

Latest News

error: Content is protected !!