Tuesday, May 14, 2024
Homeಕರಾವಳಿಉಡುಪಿಉಡುಪಿ : ತನ್ನ ಜೊತೆ ಅಸಭ್ಯವಾಗಿ ವರ್ತಿಸಿದ ಯುವಕನಿಗೆ ಚಪ್ಪಲಿಯೇಟು ನೀಡಿದ ವಿದ್ಯಾರ್ಥಿನಿ

ಉಡುಪಿ : ತನ್ನ ಜೊತೆ ಅಸಭ್ಯವಾಗಿ ವರ್ತಿಸಿದ ಯುವಕನಿಗೆ ಚಪ್ಪಲಿಯೇಟು ನೀಡಿದ ವಿದ್ಯಾರ್ಥಿನಿ

spot_img
- Advertisement -
- Advertisement -

ಉಡುಪಿ : ತನ್ನ ಜೊತೆ ಅಸಭ್ಯವಾಗಿ ವರ್ತಿಸಿದ ಯುವಕನಿಗೆ ವಿದ್ಯಾರ್ಥಿನಿ ಚಪ್ಪಲಿಯೇಟು ನೀಡಿದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ವಕ್ವಾಡಿಯಲ್ಲಿ ನಡೆದಿದೆ.

ಉಡುಪಿ ಬ್ರಹ್ಮಾವರ ತಾಲೂಕಿನ ಬಾರಕೂರಿನ ನಿವಾಸಿ ನಜೀರ್‌ (35) ಎಂಬಾತ ಚಪ್ಪಲಿಯೇಟು ತಿಂದವ. ಬೀಜಾಡಿ – ವಕ್ವಾಡಿ ರಸ್ತೆಯಲ್ಲಿರುವ ಹಾಸ್ಟೆಲ್‌ನಿಂದ ಯುವತಿ ಕಾಲೇಜಿಗೆ ತೆರಳುತ್ತಿದ್ದಳು. ಆಗ ಹಿಂದಿನಿಂದ ಬಂದ ನಜೀರ್‌ ಆಕೆಗೆ ಕಿರುಕುಳ ನೀಡಿ ಅಸಭ್ಯವಾಗಿ ವರ್ತಿಸಿದ್ದಾನೆ. ಈ ವೇಳೆಯಲ್ಲಿ ವಿದ್ಯಾರ್ಥಿನಿ ಕೂಗಿಕೊಂಡಿದ್ದಾಳೆ. ಈ ವೇಳೆಯಲ್ಲಿ ಸ್ಥಳಕ್ಕೆ ಬಂದ ಸ್ಥಳೀಯರು ಆರೋಪಿಯನ್ನು ಹಿಡಿದು ವಿಚಾರಿಸಿದ ವೇಳೆಯಲ್ಲಿ ವಿದ್ಯಾರ್ಥಿನಿ ವಿಚಾರವನ್ನು ತಿಳಿಸಿದ್ದು, ನಜೀರ್‌ಗೆ ಚಪ್ಪಲಿಯೇಟು ಕೊಟ್ಟಿದ್ದಾಳೆ.

ನಜೀರ್‌ ಕೂಲಿ ಕೆಲಸ ಮಾಡಿಕೊಂಡಿದ್ದ. ಆರೋಪಿಯನ್ನು ಸ್ಥಳೀಯರು ಹಿಡಿದು ಕುಂದಾಪುರ ಠಾಣೆಯ ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಕುರಿತು ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ. ಕಳೆದ ವರ್ಷವಷ್ಟೇ ಮೆಟ್ರಿಕ್‌ ನಂತರದ ವಿದ್ಯಾರ್ಥಿನಿಯರ ಹಾಸ್ಟೆಲ್‌ ಅನ್ನು ಉದ್ಘಾಟಿಸಲಾಗಿತ್ತು. ಆದರೆ ಈ ಭಾಗದಲ್ಲಿ ಹಾಸ್ಟೆಲ್‌ ಇರುವುದು ವಿದ್ಯಾರ್ಥಿನಿಯರಿಗೆ ಸೇಪ್‌ ಅಲ್ಲಾ ಅನ್ನೋ ಮಾತುಗಳು ಕೇಳಿಬಂದಿದೆ. ಸದ್ಯ ವಿದ್ಯಾರ್ಥಿನಿ ಆರೋಪಿಗೆ ಚಪ್ಪಲಿಯೇಟು ನೀಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

- Advertisement -
spot_img

Latest News

error: Content is protected !!