Thursday, June 4, 2026
Homeಕರಾವಳಿಉಡುಪಿಉಡುಪಿ; ಬಿಸಿಎಂ ಹಾಸ್ಟೆಲ್ ಗೆ ನುಗ್ಗಿ ವಿದ್ಯಾರ್ಥಿನಿಗೆ ಕಿರುಕುಳ ನೀಡಿ ಅಪರಿಚಿತ ಪರಾರಿ

ಉಡುಪಿ; ಬಿಸಿಎಂ ಹಾಸ್ಟೆಲ್ ಗೆ ನುಗ್ಗಿ ವಿದ್ಯಾರ್ಥಿನಿಗೆ ಕಿರುಕುಳ ನೀಡಿ ಅಪರಿಚಿತ ಪರಾರಿ

- Advertisement -
- Advertisement -

ಉಡುಪಿ; ಅಪರಿಚಿತ ಬಿಸಿಎಂ ಹಾಸ್ಟೆಲ್ ಗೆ ನುಗ್ಗಿ ವಿದ್ಯಾರ್ಥಿನಿಗೆ ಕಿರುಕುಳ ನೀಡಿ ಪರಾರಿಯಾಗಿರುವ ಘಟನೆ ಅನಂತನಗರದ ಬಿಸಿಎಂ ಬಾಲಕಿಯರ ವಸತಿ ನಿಲಯದಲ್ಲಿ ನಡೆದಿದೆ.

ಸೆಪ್ಟಂಬರ್ 1 ರಂದು ನಸುಕಿನ ಜಾವ 2 ಗಂಚೆ ವೇಳೆಗೆ ಹಾಸ್ಟೆಲ್ ಒಳಗೆ ಅಕ್ರಮವಾಗಿ ಪ್ರವೇಶಿಸಿದ ಅಪರಿಚಿತ ವ್ಯಕ್ತಿ ಕಿಟಕಿ ಮೂಲಕ ಕೈ ಹಾಕಿ ವಿದ್ಯಾರ್ಥಿನಿಗೆ ಕಿರುಕುಳ ನೀಡಿ ಪರಾರಿಯಾಗಿದ್ದಾನೆ ಎನ್ನಲಾಗಿದೆ.

ವಿದ್ಯಾರ್ಥಿನಿ ಕೂಡಲೇ ಕಿರುಚಿದಾಗ ಆತ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಬಳಿಕ ಹಾಸ್ಟೆಲ್‌ನಲ್ಲಿದ್ದ ಪರಿಶೀಲಿಸಿದಾಗ ವ್ಯಕ್ತಿಯೊಬ್ಬರು ಬಂದು ಹೋಗಿರುವುದು ಕಂಡುಬಂದಿದೆ. ಆದರೆ ಆತನ ಮುಖ ಚಹರೆ ಸ್ಪಷ್ಟವಾಗಿ ಕಂಡುಬಂದಿಲ್ಲ ಎಂದು ತಿಳಿದುಬಂದಿದೆ.ಈ ಬಗ್ಗೆ ವಸತಿ ನಿಲಯದ ವಾರ್ಡನ್ ನೀಡಿದ ದೂರಿನಂತೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!