Sunday, June 7, 2026
Homeಕರಾವಳಿಉಡುಪಿಉಡುಪಿ; ಅಪರಿಚಿತ ವಾಹನ ಡಿಕ್ಕಿಯಾಗಿ ಯುವಕ ಸಾವು

ಉಡುಪಿ; ಅಪರಿಚಿತ ವಾಹನ ಡಿಕ್ಕಿಯಾಗಿ ಯುವಕ ಸಾವು

- Advertisement -
- Advertisement -

ಉಡುಪಿ; ಅಪರಿಚಿತ ವಾಹನ ಡಿಕ್ಕಿಯಾಗಿ ಯುವಕ ಸಾವನ್ನಪ್ಪಿರುವ ಘಟನೆ ಕೋಟದ ಕಾವಡಿಯಲ್ಲಿ ಎಂಬಲ್ಲಿ ನಡೆದಿದೆ. ಬಾರ್ಕೂರು ಸಮೀಪ ಹೇರಾಡಿ ನಿವಾಸಿ ನಾಗೇಶ್‌ ಆಚಾರ್ಯ (32) ಮೃತ ದುರ್ದೈವಿ.
ಮೃತ ನಾಗೇಶ್‌ ಅವರು ಕೋಟ ಸಮೀಪದ ಖಾಸಗಿ ಗೇರುಬೀಜ ಕಾರ್ಖಾನೆಯಲ್ಲಿ ಮೇಲ್ವಿಚಾರಕನಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಸಂಜೆ ಕೆಲಸ ಮುಗಿಸಿ ಮನೆಗೆ ವಾಪಸಾಗುವಾಗ ಕಾವಡಿ ಸೇತುವೆ ಸಮೀಪ ಯಾವುದೋ ವಾಹನ ಡಿಕ್ಕಿಯಾಗಿ ಬಿದ್ದುಕೊಂಡಿದ್ದರು.
ಸ್ವಲ್ಪ ಹೊತ್ತಿನ ಬಳಿಕ ಪರಿಚಯಸ್ಥರು ಅದೇ ದಾರಿಯಲ್ಲಿ ಬರುವಾಗ ಗಮನಿಸಿ ಚಿಕಿತ್ಸೆಗಾಗಿ ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಅಷ್ಟರಲ್ಲಿ  ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಘಟನೆಯ ಕುರಿತು ಕೋಟ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!