Thursday, June 4, 2026
Homeಕರಾವಳಿಉಡುಪಿಉಡುಪಿ: ಮರಕ್ಕೆ ಬೈಕ್ ಡಿಕ್ಕಿಯಾಗಿ ಯುವಕ ಸಾವು

ಉಡುಪಿ: ಮರಕ್ಕೆ ಬೈಕ್ ಡಿಕ್ಕಿಯಾಗಿ ಯುವಕ ಸಾವು

- Advertisement -
- Advertisement -

ಉಡುಪಿ: ಮರಕ್ಕೆ ಬೈಕ್ ಡಿಕ್ಕಿಯಾಗಿ ಯುವಕ ಸಾವನ್ನಪ್ಪಿರುವ ಘಟನೆ ಬೈರಂಪಳ್ಳಿ ಗ್ರಾಮದ ದೂಪದಕಟ್ಟೆ ಚೌಡೇಶ್ವರಿ ದೇವಸ್ಥಾನದ ಸಮೀಪ ನಡೆದಿದೆ. ಸಂತೋಷ್(28) ಮೃತ ಯುವಕ.

ಸಂತೋಷ್ ಪೆರ್ಡೂರಿನಿಂದ ಹರಿಖಂಡಿಗೆ ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದಾಗ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆದಿದ್ದಾರೆ. ಪರಿಣಾಮ ಸಂತೋಷ್ ಅವರು ಗಂಭೀರ ಗಾಯಗೊಂಡಿದ್ದು, ಅವರನ್ನು ಹಿರಿಯಡ್ಕ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದಾರೆ.  ಈ ಕುರಿತು ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!