Saturday, June 6, 2026
Homeಕರಾವಳಿಉಡುಪಿಉಡುಪಿ: ಟೂರ್ ಗೆಂದು ಹೋಗಿದ್ದ ಯುವತಿ ನಾಪತ್ತೆ

ಉಡುಪಿ: ಟೂರ್ ಗೆಂದು ಹೋಗಿದ್ದ ಯುವತಿ ನಾಪತ್ತೆ

- Advertisement -
- Advertisement -

ಉಡುಪಿ: ಟೂರ್ ಗೆಂದು ಹೋಗಿದ್ದ ಯುವತಿ ನಾಪತ್ತೆಯಾಗಿರುವ ಘಟನೆ ಕಾಪು ತಾಲೂಕಿನ ಕಟಪಾಡಿ ಏಣಗುಡ್ಡೆ ಎಂಬಲ್ಲಿ ನಡೆದಿದೆ. ಇಲ್ಲಿನ ಸೌಂದರ್ಯ ಹೆಚ್ ಎ, (20) ನಾಪತ್ತೆಯಾದ ಯುವತಿ. ಈಕೆ ಮೇ 30 ರಂದು ತನ್ನ ಕಾಲೇಜಿನ ಸ್ನೇಹಿತರೊಂದಿಗೆ ಕೊಡಗು ಪ್ರವಾಸಕ್ಕೆ ಹೋಗುವುದಾಗಿ ಮನೆಯಲ್ಲಿ ಹೇಳಿ ಹೋದಾಕೆ ಪ್ರವಾಸಕ್ಕೂ ಹೋಗದೆ, ಮನೆಗೂ ಬಾರದೆ ನಾಪತ್ತೆಯಾಗಿದ್ದಾಳೆ.


ಯುವತಿಯು 4 ಅಡಿ ಎತ್ತರ, ಸಾಧಾರಣ ಶರೀರ, ಗೋಧಿ ಮೈ ಬಣ್ಣ ಹೊಂದಿದ್ದು, ಕನ್ನಡ, ತುಳು ಹಾಗೂ ಇಂಗ್ಲೀಷ್ ಭಾಷೆ ಮಾತಾಡುತ್ತಾರೆ ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆ ದೂ.ಸಂ: 0820-2520444, ಉಡುಪಿ ಕಂಟ್ರೋಲ್ ರೂಂ: 0820-2526444, ಪೊಲೀಸ್ ನಿರೀಕ್ಷಕರು ಮೊ.ನಂ: 9480805408 ಹಾಗೂ ಪೊಲೀಸ್ ಉಪ-ನಿರೀಕ್ಷಕರು ಮೊ.ನಂ:9080805445 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಉಡುಪಿ ನಗರ ಪೊಲೀಸ್ ಠಾಣಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

- Advertisement -

Latest News

error: Content is protected !!