Saturday, June 6, 2026
Homeಕರಾವಳಿಉಡುಪಿಉಡುಪಿ ; ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಆರೋಪಿ ಗಡಿಪಾರು

ಉಡುಪಿ ; ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಆರೋಪಿ ಗಡಿಪಾರು

- Advertisement -
- Advertisement -

ಉಡುಪಿ ; ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಆರೋಪಿಯನ್ನು ಗಡಿಪಾರು ಮಾಡಿ ಜಿಲ್ಲಾ ಪೊಲೀಸ್ ಅಧೀಕ್ಷಕರು ಹಾಗೂ ವಿಶೇಷ ಕಾರ್ಯಾಂಗ ದಂಡಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಬ್ರಹ್ಮಾವರ ತಾಲೂಕಿನ ವಾರಂಬಳ್ಳಿ ಗ್ರಾಮದ ನಿವಾಸಿ ಭರತ್‌ ಜಯರಾಮ್‌ ದಾಸ (34) ಗಡಿಪಾರು ಶಿಕ್ಷೆಗೆ ಒಳಗಾದ ಆರೋಪಿ


ಆರೋಪಿ ಭರತ್ ವಿರುದ್ಧ ಈಗಾಗಲೇ ಕೋಟ ಮತ್ತು ಕುಂದಾಪುರ ಪೊಲೀಸ್ ಠಾಣೆಗಳಲ್ಲಿ ಒಟ್ಟು ಮೂರು ಕ್ರಿಕೆಟ್ ಬೆಟ್ಟಿಂಗ್ ಪ್ರಕರಣಗಳು ದಾಖಲಾಗಿದ್ದವು. ಈ ಪೈಕಿ ಒಂದು ಪ್ರಕರಣದಲ್ಲಿ ಈತನಿಗೆ ಶಿಕ್ಷೆಯಾಗಿದ್ದು, ಉಳಿದ ಎರಡು ಪ್ರಕರಣಗಳು ತನಿಖಾ ಹಂತದಲ್ಲಿವೆ. ಜಿಲ್ಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮೇ 14ರಂದು ಎಸ್‌ಪಿ ಅವರು ಈ ಆದೇಶ ಜಾರಿಗೊಳಿಸಿದ್ದಾರೆ. ಗಡಿಪಾರಾದ ಆರೋಪಿಯನ್ನು ಬೆಂಗಳೂರು ನಗರದ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಗೆ ಕಳುಹಿಸಿಕೊಡಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

- Advertisement -

Latest News

error: Content is protected !!