Friday, June 19, 2026
Homeಕರಾವಳಿಉಡುಪಿಉಡುಪಿ: 13 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

ಉಡುಪಿ: 13 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

- Advertisement -
- Advertisement -

ಉಡುಪಿ: 13 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು : ಮಲ್ಪೆ ಪೊಲೀಸ ಠಾಣೆಯ ಪೊಲೀಸರು ಅರೆಸ್ಟ್ ಮಾಡಿದ್ದಾರೆ.ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕು ಕಸಬಾ ಹೋಬಳಿಯ ಬಿಡಗನಹಳ್ಳಿ ಗ್ರಾಮದ ಮಧು ಯಾನೆ ಉಮೇಶ್ ಬಂಧಿತ ಆರೋಪಿ.

ಆರೋಪಿಯನ್ನು ಮಲ್ಪೆ ಪೊಲೀಸ್ ಠಾಣೆಯ ವಾರಂಟ್ ಸಿಬ್ಬಂದಿಗಳಾದ ವಿಶ್ವನಾಥ್ ಹೆಚ್. ಹಾಗೂ ಮಹಮ್ಮದ್ ರಫಿ ಅವರು ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ಸಮೀಪ ಆರೋಪಿಯನ್ನು ಬಂಧಿಸಿ ಮಲ್ಪೆಗೆ ಕರೆತಂದಿದ್ದಾರೆ. ಆರೋಪಿ ಮಧು ವಿರುದ್ಧ ಒಟ್ಟು ನಾಲ್ಕು ಪ್ರಕರಣಗಳು ದಾಖಲಾಗಿವೆ. ಮಲ್ಪೆ ಪೊಲೀಸ್ ಠಾಣೆಯಲ್ಲಿ ದೇವಸ್ಥಾನ ಕಳವು ಪ್ರಕರಣ, ಕಾಪು ಪೊಲೀಸ್ ಠಾಣೆಯಲ್ಲಿ ಒಂದು ದೇವಸ್ಥಾನದಲ್ಲಿ ಕಳವು, ಬೆಂಗಳೂರು ನಗರದಲ್ಲಿ ಎರಡು ಹಲ್ಲೆ ಪ್ರಕರಣ ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

Latest News

error: Content is protected !!