Wednesday, October 7, 2026
Homeಕರಾವಳಿಉಡುಪಿಉಡುಪಿ: ಶ್ರೀ ಕೃಷ್ಣ ಮಠಕ್ಕೆ ನಟ 'ನೆನಪಿರಲಿ' ಪ್ರೇಮ್ ದಂಪತಿ ಭೇಟಿ

ಉಡುಪಿ: ಶ್ರೀ ಕೃಷ್ಣ ಮಠಕ್ಕೆ ನಟ ‘ನೆನಪಿರಲಿ’ ಪ್ರೇಮ್ ದಂಪತಿ ಭೇಟಿ

- Advertisement -
- Advertisement -

ಪ್ರಥಮ ಪರ್ಯಾಯದ ಪವಿತ್ರ ಸಂದರ್ಭದಲ್ಲಿ, ಕನ್ನಡ ಚಿತ್ರರಂಗದ ಪ್ರಸಿದ್ಧ ನಟ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು ತಮ್ಮ ಧರ್ಮಪತ್ನಿಯೊಂದಿಗೆ ಶ್ರೀ ಕೃಷ್ಣ ಮಠಕ್ಕೆ ಆಗಮಿಸಿ ದೇವರ ದರ್ಶನ ಪಡೆದರು.

ಶ್ರೀ ಕೃಷ್ಣ ದೇವರ ದರ್ಶನ ಪಡೆದು ಪ್ರಾರ್ಥನೆ ಸಲ್ಲಿಸಿದ ಬಳಿಕ, ಪ್ರೇಮ್ ದಂಪತಿಯು ಪರ್ಯಾಯ ಶೀರೂರು ಮಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರನ್ನು ಭೇಟಿಯಾದರು. ಈ ವೇಳೆ ಶ್ರೀಪಾದರು ಪ್ರೇಮ್ ದಂಪತಿಗೆ ಫಲ ಮಂತ್ರಾಕ್ಷತೆ ನೀಡಿ ದಿವ್ಯ ಆಶೀರ್ವಾದ ನೀಡಿದರು.

ಈ ಸಂದರ್ಭದಲ್ಲಿ ಶ್ರೀ ಮಠದ ಪ್ರಮುಖರು, ಅರ್ಚಕರು ಹಾಗೂ ಅಭಿಮಾನಿಗಳು ಉಪಸ್ಥಿತರಿದ್ದರು.

- Advertisement -

Latest News

error: Content is protected !!