Thursday, June 4, 2026
Homeಕರಾವಳಿಉಡುಪಿನಾಳೆ ರಾತ್ರಿಯಿಂದ ಉಡುಪಿ ಜಿಲ್ಲೆಯ ಎಲ್ಲಾ ಗಡಿಗಳು ಸೀಲ್ ಡೌನ್

ನಾಳೆ ರಾತ್ರಿಯಿಂದ ಉಡುಪಿ ಜಿಲ್ಲೆಯ ಎಲ್ಲಾ ಗಡಿಗಳು ಸೀಲ್ ಡೌನ್

- Advertisement -
- Advertisement -

ಉಡುಪಿ: ಕೊರೋನಾ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ನಾಳೆ ರಾತ್ರಿಯಿಂದ ಮುಂದಿನ14 ದಿನಗಳ ಕಾಲ ಉಡುಪಿ ಜಿಲ್ಲೆಗೆ ಎಲ್ಲಾ ಕಡೆಯಿಂದ ಬರುವಂತ ಗಡಿಯನ್ನು ಬಂದ್ ಮಾಡಿ, ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ನಡೆದಂತೆ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಂಡಿರುವ ಜಿಲ್ಲಾಧಿಕಾರಿ ಜಿ.ಜಗದೀಶ್, ಉಡುಪಿ ಜಿಲ್ಲೆಯಲ್ಲಿ ಲಾಕ್ ಡೌನ್ ಜಾರಿಗೊಳಿಸುವ ಅವಶ್ಯಕತೆ ಇಲ್ಲ, ಅದರ ಬದಲು 14 ದಿನ ಉಡುಪಿ ಜಿಲ್ಲೆಯ ಗಡಿಭಾಗ ಬಂದ್ ಮಾಡಲು ನಿರ್ಧರಿಸಲಾಗಿದೆ. ಗಡಿ ಭಾಗ ಸೀಲ್ ಡೌನ್ ಮಾಡಲಾಗುತ್ತಿದೆ. ಭಾನುವಾರ ಮಾತ್ರ ಕಂಪ್ಲೀಟ್ ಲಾಕ್ ಡೌನ್ ಇರಲಿದೆ ಎಂಬುದಾಗಿ ತಿಳಿಸಿದ್ದಾರೆ.

ಸಭೆಯಲ್ಲಿ ಶಾಸಕರಾದ ಸುನೀಲ್ ಕುಮಾರ್, ಸುಕುಮಾರ್ ಶೆಟ್ಟಿ, ಲಾಲಾಜಿ ಆರ್ ಮೆಂಡನ್, ಶ್ರೀನಿವಾಸ್ ಶೆಟ್ಟಿ ಜಿಲ್ಲಾ ಆರೋಗ್ಯ ಅಧಿಕಾರಿಗಳಾದ ಸುಧೀರ್ ಚಂದ್ರ ಸೂಡ, ಸೇರಿ ಅನೇಕ ಗಣ್ಯರು ಉಪಸ್ಥಿತರಿದ್ದರು.

- Advertisement -

Latest News

error: Content is protected !!