- Advertisement -
![]()
- Advertisement -
ಬೆಂಗಳೂರು; ಕರಾವಳಿಯ ದಕ್ಷಿಣ ಕನ್ನಡ ಹಾಗು ಉಡುಪಿ ಜಿಲ್ಲೆಯಲ್ಲಿ ವಸತಿ ಮತ್ತು ವಾಣಿಜ್ಯ ಸಂಬಂಧ ಭೂ ಪರಿವರ್ತನೆ ಜಮೀನುಗಳ ಏಕ ವಿನ್ಯಾಸ 9/11 ನಕ್ಷೆಗಳಿಗೆ ಆಯಾ ಗ್ರಾಮ ಪಂಚಾಯತ್ ಗಳಲ್ಲಿಯೆ ಅನುಮೋದನೆ ನೀಡುವ ಕುರಿತು ಕಂದಾಯ ಸಚಿವ ಕೃಷ್ಣ ಭೈರೇಗೌಡ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಸಭಾಧ್ಯಕ್ಷರ ಕಚೇರಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಹಾಗೂ ಉಡುಪಿ ಜಿಲ್ಲೆಯ ಶಾಸಕರು ಮನವಿ ಮಾಡಿದ್ರು.

ದಕ್ಷಿಣ ಕನ್ನಡ ಜಿಲ್ಲೆಯ ಹಾಗೂ ಉಡುಪಿ ಜಿಲ್ಲೆಯ ಶಾಸಕರೆಲ್ಲರೂ ಜನಸಾಮಾನ್ಯರಿಗೆ ಉಂಟಾಗುತ್ತಿರುವ ಸಮಸ್ಯೆಯ ಕುರಿತು ಸಚಿವರ ಗಮನಕ್ಕೆ ತಂದರು. ಅಲ್ಲದೇ ತಕ್ಷಣ ಈ ಸಮಸ್ಯೆಯನ್ನು ಪರಿಹರಿಸುವಂತೆ ಮನವಿ ಮನವಿ ಮಾಡಿದ್ರು. ಬೆಳ್ತಂಗಡಿ ಶಾಸಕ ಹರೀಶ್ ಪೂಂಜ , ಬೆಳ್ತಂಗಡಿ ಎಮ್.ಎಲ್.ಸಿ ಪ್ರತಾಪ್ ಸಿಂಹ ನಾಯಕ್ ಉಪಸ್ಥಿತರಿದ್ದರು.
- Advertisement -


