Monday, October 5, 2026
Homeಕರಾವಳಿಉಡುಪಿಉಡುಪಿ: ಚಲಿಸುತ್ತಿದ್ದ ರೈಲಿನಿಂದ ಬಿದ್ದು ಬೆಳ್ತಂಗಡಿ ಮೂಲದ ವ್ಯಕ್ತಿ ಸಾವು

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಬಿದ್ದು ಬೆಳ್ತಂಗಡಿ ಮೂಲದ ವ್ಯಕ್ತಿ ಸಾವು

- Advertisement -
- Advertisement -

ಉಡುಪಿ : ಚಲಿಸುತ್ತಿದ್ದ ರೈಲಿನಿಂದ ಆಕಸ್ಮಿಕವಾಗಿ ಕೆಳಗೆ ಬಿದ್ದು ಪ್ರಯಾಣಿಕರೊಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಸೋಮವಾರ ಬೆಳಿಗ್ಗೆ ನಗರದ ಇಂದ್ರಾಳಿ ರೈಲು ನಿಲ್ದಾಣದಲ್ಲಿ ಸಂಭವಿಸಿದೆ.ಮೃತರನ್ನು ಬೆಳ್ತಂಗಡಿ ತಾಲೂಕಿನ ಹೊಸಂಗಡಿ ನಿವಾಸಿ ದಿನೇಶ್ ಎಂದು ಅವರ ಬಳಿ ಸಿಕ್ಕಿದ ಮತದಾರರ ಗುರುತಿನ ಚೀಟಿಯ ಆಧಾರದ ಮೇಲೆ ಗುರುತಿಸಲಾಗಿದೆ.

ದೆಹಲಿ – ಎರ್ನಾಕುಲಂ ನಡುವೆ ಸಂಚರಿಸುವ ನಿಝಾಮುದ್ದೀನ್ ಎಕ್ಸ್‌ಪ್ರೆಸ್ ರೈಲು ಇಂದ್ರಾಳಿ ನಿಲ್ದಾಣದ ಬಳಿ ನಿಧಾನಗತಿಯಲ್ಲಿ ಚಲಿಸುತ್ತಿದ್ದಾಗ, ಎರಡನೇ ಬೋಗಿಯಲ್ಲಿದ್ದ ದಿನೇಶ್ ಅವರು ಆಕಸ್ಮಿಕವಾಗಿ ಕೆಳಗೆ ಬಿದ್ದಿದ್ದಾರೆ. ಘಟನೆ ತಿಳಿಯುತ್ತಿದ್ದಂತೆಯೇ ಆರ್‌‌ಪಿಎಫ್ ಸಿಬ್ಬಂದಿ ನೀಡಿದ ಮಾಹಿತಿಯಂತೆ ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ತಕ್ಷಣ ಸ್ಥಳಕ್ಕೆ ಧಾವಿಸಿ, ಗಂಭೀರ ಗಾಯಗೊಂಡಿದ್ದ ಅವರನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಾಗಿಸಿದರಾದರೂ, ಪರೀಕ್ಷಿಸಿದ ವೈದ್ಯರು ಅವರು ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ. ಮೃತರ ವಾರಸುದಾರರು ಅಥವಾ ಸಂಬಂಧಿಕರು ತಕ್ಷಣ ಮಣಿಪಾಲ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.

- Advertisement -

Latest News

error: Content is protected !!