Saturday, June 6, 2026
Homeಕರಾವಳಿಉಡುಪಿಉಡುಪಿ;  ಬಸ್ ಗೆ ಬೈಕ್ ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು

ಉಡುಪಿ;  ಬಸ್ ಗೆ ಬೈಕ್ ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು

- Advertisement -
- Advertisement -

ಉಡುಪಿ;   ಬಸ್ ಗೆ ಬೈಕ್ ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿರುವ ಘಟನೆ  ಇಂದು ಬೆಳಿಗ್ಗೆ ಕಟಪಾಡಿಯಲ್ಲಿ ನಡೆದಿದೆ. ಕಟಪ್ಪಾಡಿ ಸಮೀಪದ ಸರಕಾರಿ ಗುಡ್ಡೆಯ ನಿವಾಸಿ ಇಕ್ಬಾಲ್(32) ಮೃತ ದುರ್ದೈವಿ.

ಹೂವಿನ ವ್ಯಾಪಾರ ನಡೆಸುತ್ತಿದ್ದ ಇವರು ತನ್ನ ಬೈಕಿನಲ್ಲಿ ಕಟಪ್ಪಾಡಿ ರಾಷ್ಟ್ರೀಯ ಹೆದ್ದಾರಿ 66ರ ಸರ್ವಿಸ್ ರಸ್ತೆಯಲ್ಲಿ ಹೋಗುತ್ತಿರುವಾಗ ಉಡುಪಿ ಕಡೆಯಿಂದ ಮಂಗಳೂರು ಕಡೆ ಹೋಗುತ್ತಿದ್ದ ಬಸ್, ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಕಾಪು ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!