Wednesday, June 24, 2026
Homeಕರಾವಳಿಉಡುಪಿಉಡುಪಿ : ಕೋಡಿಬೇಂಗ್ರೆಯಲ್ಲಿ  ದೋಣಿ ದುರಂತ ಪ್ರಕರಣ; ಸಾವನ್ನಪ್ಪಿದವರ ಸಂಖ್ಯೆ ಮೂರಕ್ಕೆ ಏರಿಕೆ

ಉಡುಪಿ : ಕೋಡಿಬೇಂಗ್ರೆಯಲ್ಲಿ  ದೋಣಿ ದುರಂತ ಪ್ರಕರಣ; ಸಾವನ್ನಪ್ಪಿದವರ ಸಂಖ್ಯೆ ಮೂರಕ್ಕೆ ಏರಿಕೆ

- Advertisement -
- Advertisement -

ಉಡುಪಿ : ಕೋಡಿಬೇಂಗ್ರೆಯಲ್ಲಿ ಸಂಭವಿಸಿದ ದೋಣಿ ದುರಂತ ಪ್ರಕರಣದಲ್ಲಿ  ಸಾವನ್ನಪ್ಪಿದವರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.

ಕೋಡಿ ಕನ್ಯಾನ ಗ್ರಾಮದ ಕೋಡಿಬೇಂಗ್ರೆ ಅಳಿವೆಬಾಗಿಲು ಎಂಬಲ್ಲಿ ಸೋಮವಾರ ಸಂಭವಿಸಿದ ಪ್ರವಾಸಿ ದೋಣಿ ದುರಂತದಲ್ಲಿ ತೀವ್ರ ವಾಗಿ ಅಸ್ವಸ್ಥಗೊಂಡಿದ್ದ ಮತ್ತೋರ್ವ ಯುವತಿ ಮಂಗಳವಾರ ಸಂಜೆ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಮೂಲಕ ಈ ದುರಂತದಲ್ಲಿ ಮೃತರ ಸಂಖ್ಯೆ ಮೂರಕ್ಕೇರಿದೆ.ಮೃತರನ್ನು ಮೈಸೂರಿನ ಉದಯಗಿರಿ ಸಮೀಪದ ಜಲಪುರಿ ನಿವಾಸಿ ಶಿವಣ್ಣ ಎಂಬವರ ಮಗಳು ದೀಶಾ(23) ಎಂದು ಗುರುತಿಸಲಾಗಿದೆ.

ಈ ದುರಂತದಲ್ಲಿ ಸೋಮವಾರ ಚಾಮರಾಜನಗರದ ಜಿಲ್ಲೆಯ ಹರವೆ ಗ್ರಾಮದ ಶಂಕರಪ್ಪ(27) ಹಾಗೂ ಚಾಮರಾಜನಗರದ ಜಿಲ್ಲೆಯ ನರಸೀಪುರ ತಾಲೂಕಿನ ಮೂಗೂರು ನಿವಾಸಿ ಸಿಂಧು(25) ಮೃತಪಟ್ಟಿದ್ದರು. ತೀವ್ರವಾಗಿ ಅಸ್ವಸ್ಥಗೊಂಡು ಮಣಿಪಾಲ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಧರ್ಮರಾಜ(26) ಇದೀಗ ಚಿಕಿತ್ಸೆ ಸ್ಪಂದಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಇವರೆಲ್ಲ ಮೈಸೂರು ಗೋಲ್ ಕ್ರಿಸ್ಟ್ ಇಂಡಿಯಾ ಪ್ರೈವೇಟ್ ಲಿ. ಖಾಸಗಿ ಕಂಪೆನಿಯ ಉದ್ಯೋಗಿಯಾಗಿದ್ದಾರೆ.

- Advertisement -

Latest News

error: Content is protected !!