Wednesday, June 3, 2026
Homeಕರಾವಳಿಉಡುಪಿಉಡುಪಿ: ನಿಂತಿದ್ದ ಕಂಟೈನರ್‌ಗೆ ಕಾರು ಡಿಕ್ಕಿ; ತಾಯಿ ಮಗಳು ಸಾವು, ನಾಲ್ವರ ಸ್ಥಿತಿ ಗಂಭೀರ

ಉಡುಪಿ: ನಿಂತಿದ್ದ ಕಂಟೈನರ್‌ಗೆ ಕಾರು ಡಿಕ್ಕಿ; ತಾಯಿ ಮಗಳು ಸಾವು, ನಾಲ್ವರ ಸ್ಥಿತಿ ಗಂಭೀರ

- Advertisement -
- Advertisement -

ಉಡುಪಿ: ನಿಂತಿದ್ದ ಕಂಟೈನರ್‌ಗೆ ಕಾರು ಡಿಕ್ಕಿಯಾದ ಪರಿಣಾಮ ತಾಯಿ ಮಗಳು ಸಾವನ್ನಪ್ಪಿ, ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ನಾವುಂದದ ಬಳಿ ನಡೆದಿದೆ.

ಮಮತಾ (36) ಹಾಗೂ ಮಗಳು ಧೃತಿಕಾ (14) ಸಾವನ್ನಪ್ಪಿದ್ದು, ಮಮತಾ ಪತಿ  ರಾಘು (40), ಮಕ್ಕಳಾದ ಜಾಹ್ನವಿ (12), ಚಾರ್ವಿ (10) ಹಾಗೂ ಕಾರು ಚಾಲಕ ಕಿರಣ್‌ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೃತಪಟ್ಟವರು ಬೆಂಗಳೂರು ಮೂಲದವರು ಎನ್ನಲಾಗಿದೆ.

ಪ್ರವಾಸಕ್ಕೆ ಬಂದ ಕುಟುಂಬ ಉಡುಪಿ ಜಿಲ್ಲೆಯ ಹಲವು ಪ್ರವಾಸಿ ತಾಣಗಳಿಗೆ ಭೇಟಿ ನೀಡಿತ್ತು. ನಂತರ ಮುರುಡೇಶ್ವರ ಮತ್ತು ಗೋಕರ್ಣ ಕ್ಷೇತ್ರಗಳ ದರ್ಶನದ ಉದ್ದೇಶದಿಂದ ಬೈಂದೂರು ಮಾರ್ಗವಾಗಿ ಪ್ರಯಾಣ ನಡೆಸುತ್ತಿದ್ದ ಸಮಯದಲ್ಲಿ ಈ ದುರ್ಘಟನೆ ನಡೆದಿದೆ. ಗಾಯಗೊಂಡ ತಂದೆ ಮತ್ತು ಇಬ್ಬರು ಮಕ್ಕಳಿಗೆ ಕುಂದಾಪುರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದರೆ, ಕಾರು ಚಾಲಕ ಕಿರಣ್‌ನ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

- Advertisement -

Latest News

error: Content is protected !!